ಆಗಸ್ಟ್ 13ರಿಂದ 15ರವರೆಗೆ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು

    ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್‌ ಹಿನ್ನೆಲೆಯಲ್ಲಿ ನಾಳೆ ಅಂದರೆ ಆಗಸ್ಟ್ 12ರಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ. ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

   ಆಗಸ್ಟ್ 14 ಮತ್ತು 15 ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು, ಬೆಳಿಗ್ಗೆ 5ರ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 13 ಮತ್ತು 14 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ.

   ಪೀಣ್ಯ ಇಂಡಸ್ಟ್ರಿಯಿಂದ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆಗಸ್ಟ್ 14 ಮತ್ತು 15 ರಂದು ಬೆಳಿಗ್ಗೆ 5 ಗಂಟೆಗೆ ಸಂಚಾರ ಪ್ರಾರಂಭವಾಗುತ್ತದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.  ಆಗಸ್ಟ್ 13 ರಂದು ಕೊನೆಯ ರೈಲು ಸೇವೆ ರಾತ್ರಿ 11 ರ ಬದಲಾಗಿ 10 ಗಂಟೆಯವರೆಗೆ ಸಂಚಾರ ಇರಲಿದೆ.

  •  ಆಗಸ್ಟ್ 14 ರಂದು ಬೆಳಿಗ್ಗೆ 5ರ ಬದಲಾಗಿ 6ಕ್ಕೆ ಸಂಚಾರ ಪ್ರಾರಂಭವಾಗಲಿದೆ.
  • ಕೊನೆಯ ರೈಲು ಸೇವೆ ರಾತ್ರಿ 11ರ ಬದಲಾಗಿ 10 ಗಂಟೆಯವರೆಗೆ ಇರಲಿದೆ.
  •  ಆಗಸ್ಟ್ 15 ರಂದು ಬೆಳಿಗ್ಗೆ 5ರ ಬದಲಾಗಿ 6 ಗಂಟೆಯಿಂದ ಸಂಚಾರ ಆರಂಭಿಸಲಿವೆ.
  • ನಾಗಸಂದ್ರ ನಿಲ್ದಾಣದಿಂದ ಆಗಸ್ಟ್ 13 ಮತ್ತು 14ರಂದು ಕೊನೆಯ ರೈಲು ಸೇವೆಯು ರಾತ್ರಿ 11 ಗಂಟೆಯ ಬದಲಾಗಿ 10 ಗಂಟೆಗೆ ಕೊನೆಗೊಳ್ಳುತ್ತದೆ.

 

Recent Articles

spot_img

Related Stories

Share via
Copy link