ಬೆಂಗಳೂರು:
ಮೆಜೆಸ್ಟಿಕ್ ನಮ್ಮ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಟ್ರೈನ್ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಟ್ರ್ಯಾಕಿಗೆ ಜಿಗಿದಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದವ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ನಿನ್ನೆ ರಾತ್ರಿ 10.04ರ ಸುಮಾರಿಗೆ ಈ ಘಟನೆ ನಡೆದಿದೆ. ಹಸಿರು ಮಾರ್ಗದ ಮೆಟ್ರೊ ಲೈನ್ ಫ್ಲಾಟ್ ಫಾರ್ಮ್ 1ರಲ್ಲಿ 35 ವರ್ಷದ ವ್ಯಕ್ತಿ ಮೆಟ್ರೊ ಟ್ರ್ಯಾಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ. ಟ್ರೈನ್ ಬರುವ ವೇಳೆ ವ್ಯಕ್ತಿಯು ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕಾರಣ ಗಂಭೀರ ಗಾಯಗಳಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೆಟ್ರೋದಲ್ಲಿ ಬಿಗಿ ಸೆಕ್ಯೂರಿಟಿ ಇದ್ದರೂ ಇಂತಹ ಘಟನೆಗಳು ಸಂಭವಿಸುತ್ತಲೇ ಇದೆ. ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆಗಳು ಈ ಹಿಂದಿಯೂ ದಾಖಲಾಗಿದೆ. ಹೀಗಾಗಿ ಬಿಎಂಆರ್ಸಿಎಲ್ ಮತ್ತಷ್ಟು ಭದ್ರತೆ ಹೆಚ್ಚಿಸಿದೆ.








