ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ

ಬೆಂಗಳೂರು

   ಬೆಂಗಳೂರು ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ #RevokeMetroFareHike ಅಭಿಯಾನ ಆರಂಭಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಹ, ಮೆಟ್ರೋ ದರ ಏರಿಕೆ ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

   ಮೆಟ್ರೋ ದರ ಏರಿಕೆ ಜನರಿಗೆ “ಅನ್ಯಾಯದ ಹೊರೆ” ಎಂದು ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ ಟೀಕಿಸಿದ್ದಾರೆ. ಅವರು ಮೆಟ್ರೋ ದರ ನಿಗದಿಯಲ್ಲಿ ಪಾರದರ್ಶಕತೆಯನ್ನು ಒತ್ತಾಯಿಸಿದ್ದರ ಜತೆಗೆದರ ನಿಗದಿ ಸಮಿತಿ ವರದಿಯನ್ನು ಪ್ರಕಟಿಸಬೇಕೆಂದು ಒತ್ತಾಯಿಸಿದ್ದಾರೆ.ಪ್ರಯಾಣಿಕರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಬಿಎಂಆರ್‌ಸಿಎಲ್ ಮಾಸಿಕ, ತ್ರೈಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ಪರಿಚಯಿಸಬೇಕು.
   ಇದು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ. ದೇಶದ ಪ್ರಮುಖ ಮೆಟ್ರೋ ಜಾಲಗಳಲ್ಲಿ, ಕೋಲ್ಕತ್ತಾ ಮೆಟ್ರೋ ಅತ್ಯಂತ ಅಗ್ಗದ ಪ್ರಯಾಣವನ್ನು ನೀಡುತ್ತದೆ. ಅಲ್ಲಿ ಕನಿಷ್ಠ 5 ರೂ. ಮತ್ತು ಗರಿಷ್ಠ 50 ರೂ. ದರದಲ್ಲಿ ಪ್ರಯಾಣ ದರ ನಿಗದಿಯಾಗಿದೆ. 25 ಕಿ.ಮೀ. ಮೀರಿ 30 ಕಿ.ಮೀ.ವರೆಗಿನ ಪ್ರಯಾಣಕ್ಕೆ ಗರಿಷ್ಠ 25 ರೂ. ಇದೆ. ಚೆನ್ನೈ ಮೆಟ್ರೋ 25 ಕಿ.ಮೀ.ಗೆ 50 ರೂ., ದೆಹಲಿ ಮೆಟ್ರೋ 60 ರೂ., ಬೆಂಗಳೂರು ಮೆಟ್ರೋದ ಹೊಸ ದರ ಈಗ 90 ರೂ. ಆಗಿದೆ

Recent Articles

spot_img

Related Stories

Share via
Copy link