ಬೆಂಗಳೂರು
ನಗರದಲ್ಲಿ ದಿನದಿಂದ ದಿನಕ್ಕೆ ಮೆಟ್ರೋ ಜಾಲ ವಿಸ್ತರಣೆ ಆಗುತ್ತಿದೆ. ಮೆಟ್ರೋದಲ್ಲಿ ಸಂಚಾರ ಮಾಡುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡಲು ಬಿಎಂಆರ್ಸಿಎಂ ಮುಂದಾಗಿತ್ತು. ಇದೀಗ ಕೊನೆಗೂ ಬಿಎಂಆರ್ಸಿಎಲ್ ಬೋರ್ಡ್ ದರ ಏರಿಕೆಗೆ ಅಸ್ತು ಎಂದಿದೆ. ನಾಳೆ ಅಧಿಕೃತ ಘೋಷಣೆ ಮಾಡಲಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ನೀಡಿದೆ.
ಗರಿಷ್ಠ 60 ರೂ ಇರುವ ದರದಲ್ಲಿ 90 ರೂ. ವರೆಗೆ ಹೆಚ್ಚಳವಾಗಲಿದೆ. ಪ್ರತಿ ಎರಡು ಕಿ.ಮೀ ನಂತರ ಹತ್ತು ರೂಪಾಯಿಯಷ್ಟು ಹೆಚ್ಚಳ ಮಾಡಲು ಪ್ಲಾನ್ ಮಾಡಿರುವುದಾಗಿ ಟಿವಿ9 ಗೆ ನಮ್ಮ ಮೆಟ್ರೋ ಉನ್ನತ ಮೂಲಗಳಿಂದ ಮಾಹಿತಿ ನೀಡಲಾಗಿದೆ.
ಕಳೆದ ಏಳು ವರ್ಷಗಳಿಂದ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ. ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡಲು ನಮ್ಮ ಮೆಟ್ರೋ ಇತ್ತೀಚೆಗೆ ಕಮಿಟಿ ಕೂಡ ರಚನೆ ಮಾಡಿತ್ತು. ಆ ಮೂಲಕ ಅಕ್ಟೋಬರ್ 3 ರಿಂದ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದ ಕಮಿಟಿ, ಆ ವರದಿಯನ್ನು ಡಿಸೆಂಬರ್ ಕೊನೆ ವಾರದಲ್ಲಿ ಬಿಎಂಆರ್ಸಿಎಲ್ಗೆ ಸಲ್ಲಿಸಲಿತ್ತು.
