ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ….!

ಬೆಂಗಳೂರು

   ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ​ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ  ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ವಾಪಸ್ ಕಳುಹಿಸಿದ್ದಾರೆ. “ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ” ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

   “ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ, ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಬಜೆಟ್ ಅಧಿವೇಶನದಲ್ಲಿ ಸಾದಕ-ಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ” ಎಂದು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ. 

ಇವೆಲ್ಲವನ್ನು ಕಂಡ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್​ನವರ ಕಿರುಕುಳಕ್ಕೆ ಬ್ರೇಕ್​ ಹಾಕಲು ಸುಗ್ರಿವಾಜ್ಞೆ ಮೂಲಕ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈ ಸಂಬಂಧ ಹೊಸ ನಿಮಯಗಳನ್ನು ರಚಿಸಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕರಡನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆ ವಾಪಸ್​ ಕಳುಹಿಸಿದ್ದಾರೆ.

Recent Articles

spot_img

Related Stories

Share via
Copy link