ಮಿಡಿಗೇಶಿ :
ಗ್ರಾಮ ಪಂಚಾಯಿತಿಗಳ ಅಧ್ಯಕ್ಷ- ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಅವಧಿ ಮುಗಿದು ಕೆಲವು ತಿಂಗಳುಗಳು ಕಳೆದು, ಆಡಳಿತಾಧಿಕಾರಿಗಳನ್ನು ನೇಮಿಸಿದ್ದು, ಇವರ ಅವಧಿಯಲ್ಲಿ ಉತ್ತಮ ಕೆಲಸಗಳು ಸಾಗುತ್ತಿವೆ ಎಂಬ ಅಭಿಪ್ರಾಯ ಕೇಳಿಬಂದಿದೆ.
ಗ್ರಾಮ ಪಂಚಾಯಿತಿ ಅಧಿಕಾರ ಮುಗಿದು ಕೆಲವು ತಿಂಗಳುಗಳು ಮುಗಿದ್ದು ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳವರ ನೆರವಿಗೆ ತಾಲ್ಲೂಕು ಮಟ್ಟದ ಓರ್ವ ಅಧಿಕಾರಿಯನ್ನು ನಾಲ್ಕಾರು ಗ್ರಾಮ ಪಂಚಾಯಿತಿಗಳ ಆಡಳಿತದ ಉಸ್ತುವಾರಿ ವಹಿಸಿಕೊಳ್ಳುವ ಮೂಲಕ ಗ್ರಾಮ ಪಂಚಾಯಿತಿ ನಡೆಯಲೇ ಬೇಕಾಗಿರುವಂತಹ ಕೆಲಸ ಕಾರ್ಯಗಳಗೆ ಒತ್ತು ನೀಡುತ್ತಿದ್ದಾರೆ.
ಇದರಿಂದ ಗ್ರಾಮೀಣ ಪ್ರದೇಶದ ಜನ ಸಾಮಾನ್ಯರಿಗೆ ಅಲ್ಪ-ಸ್ವಲ್ಪ ಮಟ್ಟಿಗೆ ಅನುಕೂಲಕರ ಕೆಲಸ ಕಾರ್ಯಗಳು ನಡೆಯುತ್ತಿರುವುದು ಉತ್ತಮವೆನಿಸುತ್ತಿದೆ ಎಂಬುದು ಪ್ರಜ್ಞಾವಂತ ನಾಗರೀಕರ ಒಟ್ಟಾರೆ ಅಭಿಪ್ರಾಯವಾಗಿರುತ್ತದೆ.
ಅದೇ ರೀತಿಯಲ್ಲಿ ತಾಲ್ಲೂಕಿನ ಮಿಡಿಗೇಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಎಂಟು ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಆದ್ಯತೆ ಹಾಗೂ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ವ್ಯವಸ್ಥೆ ಗ್ರಾಮಗಳ ಮದ್ಯ ಭಾಗದ ಚರಂಡಿಗಳ ದುರಸ್ಥಿ ಹಾಗೂ ಸ್ವಚ್ಛತೆ ಗಿಡಗೆಂಟೆಗಳನ್ನು ಕೀಳಿಸುವುದು ಬೀದಿಗಳ ನಿರ್ವಹಣೆಯನ್ನು ಕಳೆದ ಒಂದುವಾರದಿಂದ ನಿರಂತರವಾಗಿ ನಡೆಯುತ್ತಿದೆ.
ಪಿಡಿಒ ಜುಂಜೇಗೌಡ ಹಾಗೂ ಸಿಬ್ಬಂದಿ ಕೆಲಸ ಮಾಡುವ ಕಾರ್ಮಿಕರ ಜೊತೆಯಲಿದ್ದು ಕೆಲಸ ಕಾರ್ಯಗಳನ್ನು ಮಾಡಿಸುತ್ತಿರುತ್ತಾರೆ. ಮಿಡಿಗೇಶಿ ಗ್ರಾಮ ದೇವತೆ ದುರ್ಗಮ್ಮ ದೇವಿ ದೇವಸ್ಥಾನದ ಮುಂಭಾಗದ ಚರಂಡಿ ದುರಸ್ಥಿಗೆ ಒತ್ತು ಕೊಡುವಂತೆ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ