ಕೊನೆಗೂ ಏರಿಕೆ ಆಯ್ತು ಹಾಲಿನ ದರ ….!

ಬೆಂಗಳೂರು:

       ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್ ಕೆ.ಪಾಟೀಲ್ ಅವರು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಒಪ್ಪಿಗೆ ಸೇರಿದಂತೆ ಸಭೆಯಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು.

      ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಮ್​ಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಲು 130.40 ಕೋಟಿ ಮಂಜೂರು ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರದಲ್ಲಿ ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

      ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದೆರೆ ಅದರ ಬಗ್ಗೆ ಆಟಿಡ್ ಮಾಡಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಅಕ್ರಮ ಸಾಗಾಣಿಕೆ ಇದ್ದರೆ ಅಂತವರ ವಿರುದ್ಧ ಕ್ರಮಕ್ಕೆ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಸಿಎಂ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದರು.

    ಹಿಂದುಳಿದ ಆಯೋಗದ ಸಲಹೆಯಂತೆ ಹಾಗೂ ನ್ಯಾಯಾಲಯದ ಸಲಹೆಯಂತೆ ಹಿಂದುಳಿದ ವರ್ಗದ  3ಎ ಪಟ್ಟಿಯಲ್ಲಿರುವ ಕೊಡಗರು ಎಂಬುದರ ಬದಲಾಗಿ ಕೊಡವ/ ಕೊಡವರು ಎಂದು ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

      ಶಿವಾಜಿನಗರದ ಅಟಲ್ ವೈದ್ಯಕೀಯ ಕಾಲೇಜಿನಲ್ಲಿ ಚರಕ ಸೂಪರ್ ಅಸ್ಪತ್ರೆ ನಿರ್ಮಾಣ ಮಾಡಲು ಸಮ್ಮತಿಸಲಾಗಿದೆ. 22.70 ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಪಾಟೀಲ್ ಮಾಹಿತಿ ನೀಡಿದರು. 

      ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 26 ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ನೆಫ್ರೋ ಯೂರಾಲಜಿಯಲ್ಲಿ ಅನೆಕ್ಸ್ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

      ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಭಾರತ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸನ್ನಡೆತೆಯ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕೈದಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap