ಬೆಂಗಳೂರು
ಅಡಕೆ ಬೆಳೆಗೆ ಕನಿಷ್ಟ ಬೆಂಬಲ ಬೆಲೆ ನೀಡುವ ಪ್ರಸ್ತಾವನೆಗೆ ಕೇಂದ್ರ ವಾಣಿಜ್ಯ ಇಲಾಖೆ ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಪುತ್ತೂರಿನಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಕೃಷಿಯಂತ್ರ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಡಿಕೆ ಬೆಳೆಗಾರರ ಹಿತಕಾಯಲು ಸರಕಾರ ಬದ್ಧವಾಗಿದೆ ಎಂದು ಅಡಿಕೆ ಬೆಳೆಗಾರರ ಸಮಸ್ಯೆಗಳ ಅರಿವಿದೆ. ಈಗಾಗಲೇ ಎಲೆಚುಕ್ಕಿ ರೋಗದಿಂದ ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಅಡಿಕೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಪ್ರಸ್ತಾವನೆ ವಾಣಿಜ್ಯ ಇಲಾಖೆಗೆ ಕಳುಹಿಸಲಾಗಿದ್ದು, ಶೀಘ್ರ ನಿಗದಿತ ಬೆಂಬಲ ಬೆಲೆ ದೊರಕುವ ಸಾಧ್ಯತೆ ಇದೆ ಎಂದರು.
ಅಡಿಕೆ ನಿಷೇಧ ವಿಚಾರ ಸುಪ್ರಿಂ ಕೋರ್ಟ್ ನಲ್ಲಿ ಇದ್ದು, ಅಡಿಕೆ ಬೆಳೆಗಾರರ ಪರವಾಗಿ ಪ್ರಬಲ ವಾದ ಮಂಡಿಸಲು ಸೂಕ್ತ ನ್ಯಾಯವಾದಿಯೊಬ್ಬರನ್ನು ನೇಮಿಸಲು ಪ್ರಧಾನಿ ಮೋದಿಯವರನ್ನು ಕೋರಲಾಗಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ