ಚಿಕ್ಕಬಳ್ಳಾಪುರ:

ಕೃಷಿ ಸಚಿವ ಬಿ.ಸಿ. ಪಾಟೀಲ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಂಗಳವಾರ ತಾಲ್ಲೂಕಿನ ಹೊನ್ನಗಿರಿಯಪ್ಪನಹಳ್ಳಿ ಗ್ರಾಮದಲ್ಲಿ ರೈತರೊಬ್ಬರ ಜಮೀನಿನಲ್ಲಿ ಹುರಳಿ, ಸೌತೆಕಾಯಿ ಹಾಗೂ ಮೇವಿನ ಜೋಳದ ಬಿತ್ತನೆ ಮಾಡಿ ಖುದ್ದಾಗಿ ಉಳುಮೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಕೃಷಿ ಇಲಾಖೆಯ ಜಂಟಿ ಉಪನಿರ್ದೇಶಕಿ ರೂಪಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








