ಶಾಸಕರಿಗೆ ಸಚಿವ ಸ್ಥಾನ ಕೊಡಲು ಪಟ್ಟಣ ಪಂಚಾಯಿತಿ ಅಧ್ಯಕ್ಷರ ಒತ್ತಾಯ….!

ನಾಯಕನಹಟ್ಟಿ :

   ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ ಸತತವಾಗಿ 7 ಬಾರಿ ಗೆದ್ದಿರುವ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ರವರಿಗೆ ಮಂತ್ರಿ ಸ್ಥಾನ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ಮನವಿ ಮಾಡಿದ್ದಾರೆ.

   ಪಟ್ಟಣ ಪಂಚಾಯಿತಿಯಲ್ಲಿ ಬುಧವಾರ ಸುದ್ದಿಗೊಷ್ಠಿಯೊಂದಿಗೆ ಮಾತನಾಡಿದ ಅವರು ಅವರಿಗೆ ಸಚಿವ ಸ್ಥಾನ ಕೊಟ್ಟರೆ ರಾಜ್ಯ ಮತ್ತು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ಕೊಡಲೆಬೇಕೆಂದು ಆಗ್ರಹಿದರು. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಎಂದು ಹೆಸರುಗಳಿಸಿದ್ದಾರೆ. ಈ ಕ್ಷೇತ್ರವನ್ನು ಹಗಲು ರಾತ್ರಿ ಎನ್ನದೆ ಅಭಿವೃದ್ಧಿಯತ್ತ ಕೊಂಡೋಯ್ಯುತ್ತಾರೆ. ಸರ್ಕಾರದ ಯೋಜನೆಗಳನ್ನು ಜನರ ಬಾಗಿಲಿಗೆ ಮುಟ್ಟಿಸುವಂತಹ ಕೆಲಸ ಮಾಡಿದ್ದಾರೆ.

   ಮೊಳಕಾಲ್ಮೂರು ಕ್ಷೇತ್ರ ಅಭಿವೃದ್ಧಿ ಆಗಬೇಕಾದರೆ ಅವರಿಂದ ಮಾತ್ರ ಸಾಧ್ಯ ಶಾಸಕ ಎನ್.ವೈ.ಗೋಪಾಲಕೃಷ್ಣ ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದಾರೆ. 7 ಬಾರಿ ಶಾಸಕರಾದರು ಒಂದು ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸಿದ್ದಾರೆ. ಈ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹೆಚ್ಚಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ಲಭಿಸಿದ್ದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಭರವಸೆ ನೀಡಿದರು. ದೀನ ದಲಿತರ ಬಗ್ಗೆ ಅಪಾರವಾದ ಕಾಳಜಿ ವಹಿಸಿದ್ದಾರೆ. ಮುಂಬರುವ ಸಚಿವ ಪುನರ್‌ರಚನೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಲೇ ಬೇಕೆಂದು ಮನವಿ ಮಾಡಿಕೊಂಡರು.

   ಈ ಸಂದರ್ಭದಲ್ಲಿ ಮಾಜಿ ಪ.ಪಂ ಸದಸ್ಯ ಬಸಪ್ಪನಾಯಕ, ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಮುದಿಯಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಆರ್.ಶ್ರೀಕಾಂತ್ ಹಾಗೂ ಇನ್ನೂ ಇತರರು ಇದ್ದರು.

Recent Articles

spot_img

Related Stories

Share via
Copy link