ಬೆಳಗಾವಿ
ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಚುನಾವಣೆಯಲ್ಲಿ ರೈತರ ಪ್ರಣಾಳಿಕೆಯನ್ನು ಬಹಿರಂಗವಾಗಿ ಒಪ್ಪುವ ಪಕ್ಷಗಳಿಗೆ ರೈತರ ಬೆಂಬಲ ನೀಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಶನಿವಾರ ಪ್ರಸಕ್ತ ವಿಧಾನಸಭಾ ಚುನಾವಣೆಗೆ ರೈತರ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರೈತರ ಮಕ್ಕಳ ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸ ನೀಡಬೇಕು ಎನ್ನುವ ಬೇಡಿಕೆಯನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.
ಇನ್ನೂ ಸರ್ಕಾರಿ ನೌಕರರಿಗೆ, ಎಂಎಲ್ಎಗಳು ಮಂತ್ರಿಗಳಿಗೆ ಎಲ್ಲ ವರ್ಗದವರಿಗೂ ಪ್ರತಿ ತಿಂಗಳು ಸಂಬಳ ರೂಪದಲ್ಲಿ ಕನಿಷ್ಠ ಆದಾಯ ಬರುತ್ತದೆ, ಅದೇ ರೀತಿ ದಿನದಲ್ಲಿ ಕನಿಷ್ಠ 12 ಗಂಟೆ ದುಡಿಯುವ ರೈತರಿಗೆ ಕನಿಷ್ಠ ಆದಾಯ ಖಾತರಿ ಭದ್ರತೆ ಯೋಜನೆ ಜಾರಿಗೆ ಬರಬೇಕು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.
ಪ್ರಾಣಿಗಳ ಹಾವಳಿ, ಹಾಗೂ ದಾಳಿಯಿಂದ ರೈತನ ಬದುಕು ಹಾಳಾಗುತ್ತಿದೆ ಆದಕಾರಣ ಹಗಲು ವೇಳೆಯಲ್ಲಿ ಕೃಷಿ ಪಂಪಸೆಟ್ ಗಳಿಗೆ 12 ಗಂಟೆಗಳ ನಿರಂತರ ವಿದ್ಯುತ್ ನೀಡುವ ಭರವಸೆ ಬೇಕು. ದೇಶದ ಉದ್ಯಮಿಗಳಿಗೆ 10 ಲಕ್ಷ ಕೋಟಿ ಸಾಲ ಮನ್ನ ಮಾಡಿದ ರೀತಿಯಲ್ಲಿಯೇ ಅತಿವೃಷ್ಟಿ ಹಾನಿ ಕರೋನ ಸಂಕಷ್ಟದಿಂದ ತತ್ತರಿಸಿರುವ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಆಗಬೇಕು , ಕೃಷಿ ಸಾಲ ನೀತಿ ಬದಲಾಗಬೇಕು ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ