ಬೆಂಗಳೂರು
ಹೊಸಕೋಟೆ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಜೂರು ಮಾಡಿದ್ದ 10 ಕೋಟಿ ಹಣವನ್ನು ಸಚಿವ ಎಂಟಿಬಿ ನಾಗರಾಜ್ ತಡೆಹಿಡಿದಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಆರೋಪಿಸಿದ್ದು, ಅನುದಾನ ಬಿಡುಗಡೆ ಮಾಡಬೇಕು ಎಂದು ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಗುರುವಾರ ರಾತ್ರಿಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.
ಹೊಸಕೋಟೆ ಕ್ಷೇತ್ರಕ್ಕೆ ವಿಶೇಷ ಅನುದಾನದಡಿಯಲ್ಲಿ10 ಕೋಟಿ ಹಣ ಬಿಡುಗಡೆಗೆ ಮುಖ್ಯ ಮಂತ್ರಿಗಳು ಸೂಚಿಸಿದ್ದರು. 2022-23ನೇ ಸಾಲಿನ ಜೂನ್ ತಿಂಗಳಲ್ಲಿಈ ಬಗ್ಗೆ ಆರ್ಥಿಕ ಇಲಾಖೆಯಿಂದ ಅನುಮೋದಿಸಿ ಪತ್ರ ಬರೆಯಲಾಗಿತ್ತು. ಅಂದಿನಿಂದ ಹಣ ಬಿಡುಗಡೆ ಮಾಡದಂತೆ ಸಚಿವ ಎನ್. ನಾಗರಾಜ್ ಮುಖ್ಯಮಂತ್ರಿಗಳ ಮೇಲೆ ಒತ್ತ ಹಾಕಿ ಹಣ ಬಿಡುಗಡೆಗೆ ಅಡ್ಡಗಾಲು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ