ಬೆಂಗಳೂರು:
ಶಾಸಕ ಡಾ. ಉಮೇಶ್ ಜಾಧವ್ ಅವರು ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕಾರ ಮಾಡಲಾಗಿದೆ
ದೋಸ್ತಿ ಸರಕಾರದ ಸಚಿವ ಪುನರ್ ರಚನೆ ವೇಳೆಯಲ್ಲಿ ತಮಗೆ ಸಚಿವ ಸ್ಥಾನ ನೀಡದೆ ಪಕ್ಷದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನಗೊಂಡಿದ್ದ ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ್ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಸೇರ್ಪಡೆಯಾಗಿ, ಮಾರ್ಚ್ 3 ರಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಉಮೇಶ್ ಜಾದವ್ ರವರು ಭೇಟಿ ಮಾಡಿ ವಿಧಾನಸಭೆ ಸದಸ್ಯತ್ವಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದರು.
ರಾಜೀನಾಮೆ ಅಂಗೀಕಾರವಾಗುವ ಮುನ್ನವೇ ಬಿಜೆಪಿ ಸೇರುವ ಮೂಲಕ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ರಾಜೀನಾಮೆಯನ್ನು ಅಂಗೀಕರಿಸದಂತೆ ವಾದಿಸಿದರು.
ಇನ್ನು ಇದೇ ವೇಳೆ ಇದಕ್ಕೆ ಪ್ರತಿಯಾಗಿ ಜಾಧವ್ ಪರ ವಕೀಲ ಸಂದೀಪ್ ಪಾಟೀಲ್, ಜಾಧವ್ ಅವರು ಮಾ.4 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಮಾ.6 ರಂದು ಬಿಜೆಪಿಗೆ ಸೇರಿದ್ದಾರೆ. ಹೀಗಾಗಿ ಯಾವುದೇ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಪ್ರಶ್ನೆ ಇಲ್ಲಿ ಉದ್ಭವಿಸುವುದಿಲ್ಲ. ರಾಜೀನಾಮೆಯನ್ನು ಮೊದಲು ಅಂಗೀಕರಿಸಬೇಕು. ನಂತರ ಕಾಂಗ್ರೆಸ್ ಕೊಟ್ಟಿರುವ ಅನರ್ಹತೆ ವಿಚಾರಣೆ ಮುಂದುವರೆಸಬಹುದು ಎಂದು ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಸ್ಪೀಕರ್ ತೀರ್ಪು ಕಾಯ್ದಿರಿಸಿದ್ದಾರೆ. ಇಂದು ಸ್ಪೀಕರ್ ರಮೇಶ್ ಕುಮಾರ‍್ ಅವರು ತೀರ್ಪು ನೀಡಿದ್ದು, ತಮಗೆ ನೀಡಿದ್ದ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ.
ಅಂತಿಮವಾಗಿ ಬಿಜೆಪಿ ಸೇರಿರುವ ಜಾಧವ್ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಪಕ್ಷದಿಮದ ಕಣಕ್ಕೆ ಇಳಿದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ