ಬೆಂಗಳೂರು :
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— Dr Yathindra Siddaramaiah (@Dr_Yathindra_S) August 7, 2020
ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಸಕ ಡಾ.ಯತೀಂದ್ರ ಅವರು ಸದ್ಯದಲ್ಲಿಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ .
ಕಳೆದ 3 ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.’
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
