ರಾಜ್ಯಸಭಾ : ಬಿಜೆಪಿಗೆ ದೊಡ್ಡ ಮಟ್ಟದ ಶಾಕ್‌ ನೀಡಿದ ಶಾಸಕ….!

ಬೆಂಗಳೂರು:

   ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

   ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ.

   ಇನ್ನೂ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ.

   ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಸೋಮಶೇಖರ್ ಅವರು, “11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ನೇರ ನೇರ ಹೇಳುತ್ತೇನೆ, ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ.‌ ಕಳೆದ ಬಾರಿ (ಹಾಲಿ ಹಣಕಾಸು ಸಚಿವೆ) ನಿರ್ಮಲಾ ಸೀತಾರಾಮನ್ ಅವರಿಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತಾರಾಮನ್ ನನಗೆ ಭೇಟಿಗೆ ಅಪಾಯಿಟ್ಮೆಂಟ್ ಕೂಡ ಕೊಡಲೇ ಇಲ್ಲ,” ಎಂದು ಬೇಸರ ಹೊರಹಾಕಿದ್ದರು.

   ನನಗೆ ಯಾರು ಭರವಸೆ ಕೊಡುತ್ತಾರೋ ಅವರಿಗೆ ನಾನು ನನ್ನ ಮತ ಹಾಕುತ್ತೇನೆ. ನೆಪ ಹೇಳುತ್ತಿಲ್ಲ. ಹೇಳಿದ ಹಾಗೆ ಮತ ಚಲಾಯಿಸಿದ್ದೇನೆ. ಓಟು ಹಾಕಿಸಿಕೊಳ್ಳುವ ಮೊದಲು ಭರವಸೆ ನೀಡುತ್ತಾರೆ. 5 ಕೋಟಿ ರೂ. ಅನುದಾನ ಬರುತ್ತದೆ. ಆದರೆ, ಅದನ್ನು ನಮಗೆ ಕೊಡುತ್ತಾರಾ? ಆತ್ಮಸಾಕ್ಷಿಯಾಗಿ ಅಲ್ಲಿ (ವಿಧಾನಸೌಧಕ್ಕೆ) ಹೋಗಿ ಮತ ಚಲಾಯಿಸುತ್ತೇನೆ ಎಂದು ಹೇಳಿದರು.

   ನನ್ನ ಕ್ಷೇತ್ರ ಅಭಿವೃದ್ಧಿ ಆಗಿಲ್ಲ ಅಂತ ಹೇಳಿಲ್ಲ. ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿದ್ದೆ ಎಂದ ಅವರು,‌ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಏನು ಸಾಚಾನಾ? ಅವರು ಅವಕಾಶವಾದಿ ಅಲ್ವಾ? ಇವರನ್ನು ಮುಖ್ಯಮಂತ್ರಿ ಮಾಡಿರಲಿಲ್ವಾ? ಸಿಎಂ ಆದ್ಮೇಲೆ ಒಂದು, ಆಮೇಲೆ ಒಂದಾ? ಎಂದು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದರು.

   ಇದರ ನಡುವೆ ಮತದಾನ ಮಾಡಿದ ಬಳಿಕ ಮಾತನಾಡಿರುವ ಎಸ್‌ಟಿ ಸೋಮಶೇಖರ್, “ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಿದ್ದೇನೆ. ನಾನು ಮತದಾನ ಮಾಡಿದ್ದನ್ನು ಏಜೆಂಟ್‌ಗೆ ತೋರಿಸಿದ್ದೇನೆ,” ಎಂದಿದ್ದಾರೆ.

Recent Articles

spot_img

Related Stories

Share via
Copy link
Powered by Social Snap