ಬಿಜೆಪಿ ಮೊದಲ ಪಟ್ಟಿ ಬಿಡುಗಡೆ : MLC ಆರ್ ಶಂಕರ್ ರಾಜೀನಾಮೆ

ಬೆಂಗಳೂರು: 

     ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

     ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

     ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್ ಶಂಕರ್ ತಮ್ಮ ರಾಜಿನಾಮೆ ಪತ್ರವನ್ನು ನೀಡಿದರು. ಆರ್ ಶಂಕರ್ ಅವರು ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಅಧಿಕೃತವಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link