ಎಂ.ಎನ್.ಕೋಟೆ :
ಗುಬ್ಬಿ ತಾಲ್ಲೂಕಿನ ಎಂ.ಎನ್.ಕೋಟೆ ಸುತ್ತಮುತ್ತ ಸೋಮವಾರ ರಾತ್ರಿ ಭಾರಿ ಗಾಳಿ ಮಳೆಗೆ ಅಡಿಕೆ ಹಾಗೂ ತೆಂಗಿನ ಮರಗಳು ನೆಲೆಕಚ್ಚಿವೆ. ಈಗಾಗಲೇ ಕೊರೋನಾ ಸಂಕಷ್ಠದಲ್ಲಿರುವ ರೈತರು ಬಿರುಗಾಳಿಯಿಂದ ಅಡಿಕೆ, ತೆಂಗಿನಮರಗಳನ್ನು ಕಳೆದುಕೊಂಡು ನಷ್ಟ ಅನುಭವಿಸಿದ್ದಾರೆ.
ಗಾಳಿ ಮಳೆಗೆ ಎಂ.ಎನ್.ಕೋಟೆಯ ವಸಂತ್‍ಕುಮಾರ್ ಅವರ ಸುಮಾರು ಹತ್ತು ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ಅಡಿಕೆ, ತೆಂಗಿನ ಫಸಲನ್ನು ನಂಬಿಕೊಂಡಿದ್ದ ರೈತರು ಕಂಗಾಲಾಗಿದ್ದು, ಸಂಬಂದಪಟ್ಟ ಅಧಿಕಾರಿಗಳು ಸ್ಥಳ ಪರೀಶಿಲಿಸಿ ಸೂಕ್ತ ಪರಿಹಾರ ಕೊಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ