ಲೋಕಸಭಾ ಭದ್ರತಾ ಲೋಪ: ಆರೋಪಿಗಳ ಮೊಬೈಲ್‌ ರಾಜಸ್ಥಾನದಲ್ಲಿ ಪತ್ತೆ

ನವದೆಹಲಿ:

    ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ. ಈ ನಡುವೆ ಆರೋಪಿಗಳ ಮೊಬೈಲ್​ ಫೋನ್​ಗಳು ರಾಜಸ್ಥಾನದಲ್ಲಿ ಪತ್ತೆಯಾಗಿವೆ.

   ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಂದು (ಡಿ.17) ಬೆಳಗ್ಗೆ ಆರೋಪಿಗಳಿಗೆ ಸಂಬಂಧಿಸಿದ ಸುಟ್ಟ ಸ್ಥಿತಿಯಲ್ಲಿದ್ದ ಮೊಬೈಲ್​ ಫೋನ್​ಗಳ ಬಿಡಿ ಭಾಗಗಳು, ಬಟ್ಟೆಗಳು ಮತ್ತು ಶೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

   ಎಲ್ಲಾ ಫೋನ್​ಗಳು ಕೂಡ ಪ್ರಕರಣದ ಮಾಸ್ಟರ್​ ಮೈಂಡ್​ ಲಲಿತ್​ ಝಾ ಬಳಿ ಇತ್ತು ಎಂದು ತಿಳಿದುಬಂದಿದೆ. ಎಲ್ಲ ಫೋನ್​ಗಳನ್ನು ಮುರಿದು ಹಾಕಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಎಲ್ಲವೂ ರಾಜಸ್ಥಾನದಲ್ಲಿ ಪತ್ತೆಯಾಗಿವೆ.

   ಸರ್ಕಾರಕ್ಕೆ ತಮ್ಮ ಸಂದೇಶ ರವಾನಿಸಲು, ಆಡಳಿತದ ಮೇಲೆ ಪ್ರಭಾವ ಬೀರುವ ಕೆಲವು ಮಾರ್ಗಗಳ ಬಗ್ಗೆ ಐವರು ಆರೋಪಿಗಳು ಫೋನ್ ಗಳಲ್ಲಿ ಚರ್ಚೆ ನಡೆಸಿದ್ದರು ಎಂದು ಹೇಳಲಾಗಿತ್ತು.

   ಆರಂಭದಲ್ಲಿ ಆರೋಪಿಗಳು ತಮ್ಮ ದೇಹಕ್ಕೆ ಅಗ್ನಿಶಾಮಕ ಜೆಲ್​ ಲೇಪಿಸಿಕೊಂಡು ಸದನದಲ್ಲೇ ಬೆಂಕಿ ಹಚ್ಚಿಕೊಳ್ಳುವ ಬಗ್ಗೆ ಯೋಜನೆ ರೂಪಿಸಿದ್ದರು. ಆದರೆ, ಭದ್ರತಾ ಕಾರಣ ಮತ್ತು ಹಣದ ಕೊರತೆಯಿಂದ ಇದು ಅಸಾಧ್ಯ ಎಂಬ ಕಾರಣಕ್ಕೆ ಕೈಬಿಟ್ಟಿದ್ದರು. ಸಂಸತ್ತಿನ ಒಳಗೆ ಕರಪತ್ರಗಳನ್ನು ಹಂಚುವ ಬಗ್ಗೆಯೂ ಯೋಚಿಸಿದ್ದರು. ಆದರೆ ಅಂತಿಮವಾಗಿ ಕಲರ್ ಸ್ಪ್ರೇ ಮಾಡುವ ನಿರ್ಧಾರ ಕೈಕೊಂಡಿದ್ದರು.

  ಡಿ.13ರಂದು ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಆರೋಪಿ ಸಾಗರ್ ಶರ್ಮಾ, ಸಂದರ್ಶಕರ ಗ್ಯಾಲರಿಯಿಂದ ಚೇಂಬರ್‌ಗೆ ಜಿಗಿದ ಆಘಾತಕಾರಿ ದೃಶ್ಯಗಳಿಗೆ ಸಾಕ್ಷಿಯಾಯಿತು.ಹಳದಿ ಹೊಗೆ ಹೊರಸೂಸುವ ಡಬ್ಬಿಯನ್ನು ತೆರೆದು ಸ್ಪೀಕರ್ ಕುರ್ಚಿಯನ್ನು ತಲುಪುವ ಪ್ರಯತ್ನದಲ್ಲಿ ಸಾಗರ್​ ಶರ್ಮ ಡೆಸ್ಕ್‌ನಿಂದ ಡೆಸ್ಕ್‌ಗೆ ಜಿಗಿದದ್ದ. ಆದರೆ, ಕೆಲ ಸಂಸದರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದರು. ಈ ವೇಳೆ ಅಲ್ಲಿಯೇ ಇದ್ದ ಮನೋರಂಜನ್ ಕೂಡ ಹೊಗೆ ಡಬ್ಬಿ ತೆರೆದು ಓಡಲು ಆರಂಭಿಸಿದ್ದ. ಆದರೆ, ಆತನನ್ನು ಕೂಡ ಶೀಘ್ರದಲ್ಲೇ ವಶಕ್ಕೆ ಪಡೆಯಲಾಯಿತು. ಲೋಕಸಭೆಯ ಒಳಗೆ ನಡೆದ ಈ ಆಘಾತಕಾರಿ ಘಟನೆಗೂ ಮುನ್ನ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಸಂಸತ್ತಿನ ಹೊರಗೆ ಹೊಗೆ ಡಬ್ಬಿಗಳನ್ನು ಸಿಡಿಸಿದ್ದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap