ಮೊಬೈಲ್ ಗೀಳು: ಆತ್ಮಹತ್ಯೆಗೆ ಶರಣಾದ 13ರ ಬಾಲಕ

ಬೆಂಗಳೂರು:

    ಮೊಬೈಲ್ ಗೀಳಿಗೆ 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 7 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

   ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು ಎನ್ನಲಾಗಿದೆ. ಧ್ರುವ ಮನೆಯವರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

   ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ತಾಯಿ ಬಂದಿದ್ದಾರೆ. ಬಾಲಕ ಕೆಳಗೆ ಬಿದ್ದಿರುವುದನ್ನು ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link