ಅಗತ್ಯ ಕ್ರಮ ಕೈಗೊಳ್ಳಲು ನೀವು ಸ್ವತಂತ್ರರು : ಡಿಸಿ ಗಳಿಗೆ ಪಿಎಂ ಸೂಚನೆ!!

ನವದೆಹಲಿ: 

     ಆಯಾ ಸ್ಥಳೀಯ ಸಂದರ್ಭಗಳಿಗೆ ಹೊಂದುವ, ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನೀವು ಸ್ವತಂತ್ರರು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ(ಮೇ 18) ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಸಲಹೆ ನೀಡಿದರು.

     ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ಮೋದಿ ಅವರು ವರ್ಚುವಲ್‌ ಸಭೆ ನಡೆಸಿದರು.

      ಭಾರತಕ್ಕೆ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಈ ಸಂದರ್ಭದಲ್ಲಿ ಕೋವಿಡ್ ವಿರುದ್ಧ ಹೋರಾಟ ನಡೆಸಲು ನಿಮ್ಮೆಲ್ಲರ ಪಾತ್ರ ತುಂಬಾ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಈ ಹೋರಾಟದಲ್ಲಿ ನೀವು(ಜಿಲ್ಲಾಧಿಕಾರಿಗಳು) ಯುದ್ಧ ಕಮಾಂಡರ್ ಗಳಾಗಬೇಕು.  ಕೋವಿಡ್‌ ಪರೀಕ್ಷೆ, ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವುದು, ಕೋವಿಡ್‌ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ಕ್ರಮಗಳಿಂದ ಸೋಂಕು ಪ್ರಸರಣವನ್ನು ತಡೆಯಬಹುದು ಎಂದು ಪ್ರತಿಪಾದಿಸಿದರು. ಕೋವಿಡ್‌ ವಿರುದ್ಧ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೆಲವರು ಅಧಿಕಾರಿಗಳು ಸ್ವತಃ ಕೋವಿಡ್‌ ಪೀಡಿತರಾಗಿದ್ದಾರೆ. ಇನ್ನೂ ಕೆಲವರು ತಮ್ಮ ಕುಟುಂಬದವರನ್ನು ಕಳೆದುಕೊಂಡಿದ್ದಾರೆ. ಆದರೂ ಅವರ‍್ಯಾರೂ ಧೃತಿಗೆಡದೆ ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link