ಫ್ರಾನ್ಸ್‌ :ಇಂದಿನ AI SUMMITನಲ್ಲಿ ಮೋದಿ ಭಾಗಿ….!

ಪ್ಯಾರಿಸ್:

    ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಪ್ರವಾಸಕ್ಕೆ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ ಗೆ ಆಗಮಿಸಿದ್ದಾರೆ. ಇಂದು ಪ್ಯಾರಿಸ್ ನಲ್ಲಿ ನಡೆಯಲಿರುವ ಎಐ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸುವ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡ ಫ್ಲಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆತ್ಮೀಯ ಸ್ವಾಗತ ಕೋರಿದ್ದಾರೆ.

   ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಪ್ಯಾರಿಸ್‌ನಲ್ಲಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದ್ದು ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ. ಫ್ರಾನ್ಸ್​ನಲ್ಲಿ ಇಂದು ನಡೆಯಲಿರುವ ಎಐ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಅಲ್ಲಿಗೆ ತೆರಳಿದ್ದಾರೆ. ಅವರು ಫ್ರಾನ್ಸ್​ಗೆ ಬಮದಿಳಿಯುತ್ತಿದ್ದಂತೆ ಭಾರತೀಯ ಮೂಲದವರು ಅವರನ್ನು ವಿಶಿಷ್ಟವಾಗಿ ಬರಮಾಡಿಕೊಂಡರು. ಕಳೆದ ರಾತ್ರಿ ಔತಣಕೂಟದಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ ಆತ್ಮೀಯವಾಗಿ ಆಲಿಂಗಿಸಿ ಸ್ವಾಗತಿಸಿದರು.

   ಔತಣಕೂಟದಲ್ಲಿ, ಪ್ರಧಾನ ಮಂತ್ರಿಗಳು AI ಶೃಂಗಸಭೆಯಲ್ಲಿ ಭಾಗವಹಿಸಲು ಫ್ರಾನ್ಸ್‌ ಗೆ ಆಗಮಿಸಿರುವ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಸಹ ಭೇಟಿಯಾದರು. ಇದನ್ನು ಪ್ರಧಾನ ಮಂತ್ರಿ ಕಚೇರಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

   ಪ್ರಧಾನಿ ಮೋದಿ ತಮ್ಮ ಎರಡು ರಾಷ್ಟ್ರಗಳ ಪ್ರವಾಸದ ಮೊದಲ ಹಂತವಾಗಿ ಪ್ಯಾರಿಸ್‌ಗೆ ಆಗಮಿಸಿದರು, ತಮ್ಮ ಮೂರು ದಿನಗಳ ಭೇಟಿಯ ಸಮಯದಲ್ಲಿ, ಮೋದಿಯವರು ಪ್ಯಾರಿಸ್‌ನಲ್ಲಿ ಮ್ಯಾಕ್ರನ್ ಅವರೊಂದಿಗೆ AI ಆಕ್ಷನ್ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಲಿದ್ದಾರೆ, ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ ಮತ್ತು ಉದ್ಯಮ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿಂದ ಅಮೆರಿಕಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

   ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯಗಳಿಂದ ಅವರಿಗೆ ಅದ್ಬುತ ಸ್ಮರಣೀಯ ಸ್ವಾಗತ ದೊರೆಯಿತು. ನಮ್ಮ ವಲಸಿಗ ಭಾರತೀಯರಿಗೆ ಕೃತಜ್ಞತೆಗಳು ಮತ್ತು ಅವರ ಸಾಧನೆಗಳಿಗಾಗಿ ಹೆಮ್ಮೆಯಿದೆ ಎಂದು ಬರೆದುಕೊಂಡಿದ್ದಾರೆ.

   ಮೋದಿ ಮತ್ತು ಮ್ಯಾಕ್ರನ್ ಅವರು ಸೀಮಿತ ಮತ್ತು ನಿಯೋಗ ಸ್ವರೂಪಗಳಲ್ಲಿ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಭಾರತ-ಫ್ರಾನ್ಸ್ ಸಿಇಒ ವೇದಿಕೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ತಮ್ಮ ಭೇಟಿಯ ದ್ವಿಪಕ್ಷೀಯ ಮಾತುಕತೆಯು ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಗಾಗಿ 2047 ರ ನೀಲನಕ್ಷೆಯ ಮಾರ್ಗಸೂಚಿಯ ಪ್ರಗತಿಯನ್ನು ಪರಿಶೀಲಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

   ಇಬ್ಬರು ನಾಯಕರು ಮಾರ್ಸಿಲ್ಲೆಯಲ್ಲಿರುವ ಕಾಮನ್ವೆಲ್ತ್ ಯುದ್ಧ ಸಮಾಧಿ ಆಯೋಗವು ನಿರ್ವಹಿಸುವ ಮಜಾರ್ಗ್ಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಮೊದಲನೇ ಮಹಾಯುದ್ಧದಲ್ಲಿ ಭಾರತೀಯ ಹುತಾತ್ಮ ಸೈನಿಕರು ಮಾಡಿದ ತ್ಯಾಗಗಳಿಗೆ ಗೌರವ ಸಲ್ಲಿಸಲಿದ್ದಾರೆ. ಮಾರ್ಸಿಲ್ಲೆಯಲ್ಲಿ ಭಾರತದ ಹೊಸ ಕಾನ್ಸುಲೇಟ್ ಜನರಲ್ ಕಚೇರಿ ಉದ್ಘಾಟಿಸಲಿದ್ದಾರೆ.ಇದು ಫ್ರಾನ್ಸ್‌ಗೆ ಮೋದಿ ಅವರ ಆರನೇ ಭೇಟಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link