ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಅನೌನ್ಸ್ !

ನವದೆಹಲಿ:

    ಇಂದು‌ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ  ಜನ್ಮದಿನ. ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ‘ಮಾ ವಂದೇ’ ಚಿತ್ರ ಘೋಷಣೆ‌ ಮಾಡಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾವಾಗಿದೆ. ವೀರ್ ರೆಡ್ಡಿ ಎಂ. ನಿರ್ಮಿಸಿರುವ ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್ ನರೇಂದ್ರ ಮೋದಿಯವರ ಪಾತ್ರದಲ್ಲಿ ನಟಿಸಲಿದ್ದಾರೆ.

   ಕ್ರಾಂತಿ ಕುಮಾರ್ ಸಿ.ಎಚ್. ನಿರ್ದೇಶಿಸಲಿರುವ ‘ಮಾ ವಂದೇ’ ಸಿನಿಮಾ ಎಲ್ಲಾ ವರ್ಗಗಳ ಪ್ರೇಕ್ಷ ಕರನ್ನು ಗುರಿಯಾಗಿ ಇಟ್ಟುಕೊಂಡು ರಚಿಸಲಾಗುವುದು.‌ ಸಮಾಜದ ಕನಸುಗಳನ್ನು ಹೊಂದಿರುವ ಚಿಕ್ಕ ಹುಡುಗನಿಂದ ಭಾರತದ ಪ್ರಧಾನಿ ಯಾಗುವವರೆಗಿನ ಮೋದಿಯವರ ಪ್ರಯಾಣವನ್ನು ಚಿತ್ರ ದಲ್ಲಿ ತಿಳಿಸಲಾಗುತ್ತದೆ. ಈ ಚಿತ್ರವು ಅವರ ವೈಯಕ್ತಿಕ ಮತ್ತು ರಾಜಕೀಯ ಜೀವನ ಮತ್ತು ಸತ್ಯ ಘಟನೆಗಳ ಆಧಾರದ ಮೇಲೆ ಚಿತ್ರ‌ ಮೂಡಿಬರಲಿದೆ. 

    ನಿರ್ಮಾಪಕ ವೀರ್ ರೆಡ್ಡಿ ಮಾತನಾಡಿ, ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು, ನಮ್ಮ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಅವರ ಜೀವನ ಚರಿತ್ರೆ ‘ಮಾ ವಂದೇ’ ಅನ್ನು ಘೋಷಿಸಲು ನಮಗೆ ಅಪಾರ ಹೆಮ್ಮೆಯಾಗುತ್ತದೆ. ಈ ಚಿತ್ರವು ಮೋದಿ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣದ ಘಟನೆಗಳು ಮತ್ತು ಮೈಲಿಗಲ್ಲುಗಳನ್ನು ಅಧಿಕೃತ ರೀತಿಯಲ್ಲಿ ಪ್ರಸ್ತುತ ಪಡಿಸುತ್ತದೆ. ‘ಮಾ ವಂದೇ’ ಚಿತ್ರವನ್ನು ಎಲ್ಲಾ ಪ್ಯಾನ್-ಇಂಡಿಯಾ ಭಾಷೆಗಳಲ್ಲಿ ಹಾಗೂ ಇಂಗ್ಲಿಷ್‌ ನಲ್ಲಿ ನಿರ್ಮಿಸಲಾಗುವುದು. ಮೋದಿ ಜಿ ಮತ್ತು ಅವರ ತಾಯಿ ಹೀರಾಬೆನ್ ನಡುವಿನ ಬಾಂಧವ್ಯ ವನ್ನು ಚಿತ್ರದಲ್ಲಿ ಭಾವನಾತ್ಮಕವಾಗಿ ತೋರಿಸುವ ಜೊತೆಗೆ ರಾಷ್ಟ್ರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಾಯಕನ ಗಮನಾರ್ಹ ಪ್ರಯಾಣವನ್ನು ನಾವು ಪ್ರೇಕ್ಷಕರಿಗೆ ತರುತ್ತಿದ್ದೇವೆ” ಎಂದು ಹೇಳಿದರು.

Recent Articles

spot_img

Related Stories

Share via
Copy link