ಬೆಂಗಳೂರು:
ರಾಜ್ಯ ರಾಜಧಾನಿಯ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ 5 ದಿನಗಳ ಕಾಲ ನಡೆಯುವ ಏರೋ ಇಂಡಿಯಾ -2023ರ 14ನೇ ಆವೃತ್ತಿಯನ್ನು ಮೋದಿಯವರು ಸೋಮವಾರ ಉದ್ಘಾಟಿಸಲಿದ್ದು ಇದಕ್ಕಾಗಿ ಭಾನುವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸುವ ಮೋದಿಯವರು ರಾತ್ರಿ ರಾಜಭವನದಲ್ಲಿ ತಂಗಲಿದ್ದಾರೆ. ಸೋಮವಾರ ಬೆಳಿಗ್ಗೆ 9.30ಕ್ಕೆ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆಂದು ತಿಳಿದುಬಂದಿದೆ.
ಭಾನುವಾರ ರಾಜಸ್ಥಾನ ಪ್ರವಾಸದಲ್ಲಿರುವ ಮೋದಿಯವರು, ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಜೈಪುರ ವಿಮಾನ ನಿಲ್ದಾಣದಿಂದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ರಾತ್ರಿ 7.40ಕ್ಕೆ ಆಗಮಿಸಲಿದ್ದಾರೆ. ನಂತರ ನೇರವಾಗಿ ರಾಜಭವನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸೋಮವಾರ ಬೆಳಿಗ್ಗೆ 9 ಗಂಟೆಗೆ ರಾಜಭವನದಿಂದ ಹೊರಟು ಯಲಹಂಕದ ವಾಯುಪಡೆ ನಿಲ್ದಾಣಕ್ಕೆ ತೆರಳಲಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ಯಲಹಂಕ ವಾಯುನೆಲೆಯಿಂದ ನೇರವಾಗಿ ವಿಧಾನಸಭೆ ಚುನಾವಣೆ ನಡೆಯಲಿರುವ ತ್ರಿಪುರಕ್ಕೆ ಪ್ರಚಾರಕ್ಕೆಂದು ತೆರಳಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ