ಬೆಂಗಳೂರು :
ಪ್ರಧಾನಿ ನರೇಂದ್ರ ಮೋದಿ ಇದೇ 25ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 25 ರಂದು ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದು, ಅಲ್ಲಿಂದ ಅವರು ಹೆಲಿಕಾಫ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿ, ಮಧುಸೂದನ್ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ ಪ್ರಧಾನಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನಲ್ಲಿ ವೈಟ್‌ಫೀಲ್ಡ್ ಮೆಟ್ರೋ ರೈಲು ಮಾರ್ಗಕ್ಕೆ ಪ್ರಧಾನಿ ಚಾಲನೆ ನೀಡಿ, ನಂತರ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ.
ನಂತರ ಪ್ರಧಾನಮಂತ್ರಿ ದಾವಣಗೆರೆಗೆ ತೆರಳಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಹಿಂದಿರುಗಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಸಹ ಇದೇ ತಿಂಗಳ 24 ಮತ್ತು 26 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ