ಲಂಡನ್‌ ಭಾಷಣ : ಹೆಸರು ಬಳಸದೆ ರಾಹುಲ್‌ ರನ್ನು ಕುಟುಕಿದ ಮೋದಿ

ನವದೆಹಲಿ:

       ದೇಶದಲ್ಲಿ ಆತ್ಮವಿಶ್ವಾಸ ತುಂಬಿ ತುಳುಕುವ  ಸಂದರ್ಭದಲ್ಲಿ ಇಡೀ ವಿಶ್ವಕ್ಕೆ ಬೌದ್ಧಿಕವಾಗಿ ಕೇಂದ್ರ ಸ್ಥಾನವಾಗಿರುವ ಭಾರತದ ಬಗ್ಗೆ ಅಶಾಭಾವನೆ ಹೊಂದಿರುವಾಗ ನಿರಾಶವಾದದ ಬಗ್ಗೆ ಮಾತನಾಡುವ ಮತ್ತು  ದೇಶವನ್ನು ಅತ್ಯಂತ ಕೀಳಾಗಿ ಬಿಂಬಿಸುವ ಮತ್ತು ದೇಶದ ಮನೋಬಲನ್ನು ಕುಗ್ಗಿಸುವಂತಹ ಕೆಲಸಗಳು ನಡೆಯುತ್ತಿವೆ ಎಂದು ಹೆಸರೆತ್ತದೆ ರಾಹುಲ್ ಗಾಂಧಿಯವರಿಗೆ ಮೋದಿ ಕುಟುಕಿದರು.

      ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ತುತ್ತಾಗುತ್ತಿದೆ ಎಂಬ ಹೇಳಿಕೆ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು,  ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದೆ. ಹೀಗಾಗಿಯೇ ಅವರು ಅದರ ಮೇಲೆ ದಾಳಿ ನಡೆಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

      ಏನಾದರೂ ಶುಭ ಕಾರ್ಯಗಳು ನಡೆಯುವಾಗ ಹಣಗೆ ಕಪ್ಪು ತಿಲಕ ಇಡುವ ಸಂಪ್ರದಾಯ ಇದೆ. ಹೀಗಾಗಿಯೇ ಇದೀಗ ದೇಶದಲ್ಲಿ ಹಲವು ಶುಭ ಘಟನೆಗಳು ನಡೆಯುತ್ತಿದೆ ಎನ್ನುವ ಕಾರಣಕ್ಕಾಗಿ ಕೆಲವರು ಕಪ್ಪು ತಿಲಕ ಇಡುವ ಹೊಣೆ ಹೊತ್ತುಕೊಂಡಿದ್ದಾರೆಂದು ವ್ಯಂಗ್ಯವಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap