ತನ್ನ ಸ್ವಕ್ಷೇತ್ರಕ್ಕೆ ಭರ್ಜರಿ ಗಿಫ್ಟ್‌ ನೀಡಿದ ಮೋದಿ…!

ವಾರಣಾಸಿ: 

    ಪ್ರಧಾನಿ ನರೇಂದ್ರ ಮೋದಿ ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಸುಮಾರು 1780 ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳ ಉಡುಗೊರೆ ನೀಡಿದ್ದಾರೆ, ಪ್ರಧಾನಿ ಮೋದಿ ವಾರಣಾಸಿಯಲ್ಲಿ  28 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. 

    ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾತನಾಡಿ, ಕಾಶಿಯ ಅಭಿವೃದ್ಧಿ ಕುರಿತು ದೇಶ ಮತ್ತು ವಿಶ್ವದಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿಗೆ ಹೋಗುವವರು ಹೊಸ ಶಕ್ತಿಯಿಂದ ಹೋಗುತ್ತಿದ್ದಾರೆ. 8-9 ವರ್ಷಗಳ ಹಿಂದೆ, ಕಾಶಿಯ ಜನರು ತಮ್ಮ ನಗರವನ್ನು ಪುನರುಜ್ಜೀವನಗೊಳಿಸುವ ಪ್ರತಿಜ್ಞೆಯನ್ನು ತೆಗೆದುಕೊಂಡಾಗ, ಬನಾರಸ್‌ನಲ್ಲಿ ಬದಲಾವಣೆ ಆಗುವುದಿಲ್ಲ, ಕಾಶಿಯ ಜನರು ಯಶಸ್ವಿಯಾಗುವುದಿಲ್ಲ ಎಂಬ ಆತಂಕದಲ್ಲಿ ಅನೇಕ ಜನರಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಪ್ರಧಾನಿಯವರು ಕಾಶಿಗೆ ಬಂದಾಗಲೆಲ್ಲ ಕಾಶಿಗೆ ಹೊಸ ಉಡುಗೊರೆ ತರುತ್ತಾರೆ. ಇಂದು ಪ್ರಧಾನಿಯವರು 1,780 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಹೊಸ ಕಾಶಿ ಭವ್ಯವಾಗಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap