ಬೆಂಗಳೂರು:
ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ.
5 ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವನ್ನು ಮೋದಿಯವರು ಉದ್ಘಾಟಿಸಿದ್ದಾರೆ. ಮುಂದಿನ 5 ದಿನಗಳ ಕಾಲ ಸಿಲಿಕಾನ್ ಸಿಟಿಯ ನಭದಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿರಲಿದೆ. 2015ರಲ್ಲೂ ಮೋದಿಯವರು ಏರೋ ಇಂಡಿಯಾವನ್ನು ಉದ್ಘಾಟಿಸಿದ್ದರು.
Aero India is a wonderful platform to showcase the unlimited potential our country has in defence and aerospace sectors. https://t.co/ABqdK29rek
— Narendra Modi (@narendramodi) February 13, 2023
ಆವೃತ್ತಿಯಿಂದ ಆವೃತ್ತಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿರುವ ಏರೋ ಇಂಡಿಯಾ ಈ ಬಾರಿಯೂ ತನ್ನ ಪ್ರದರ್ಶನ ವ್ಯಾಪ್ತಿಯನ್ನು ಶೇ.3ರಷ್ಟು ವಿಸ್ತಾರಗೊಳಿಸಿಕೊಂಡಿದೆ. ಹೀಗಾಗಿ ಕಳೆದ ವರ್ಷಕ್ಕಿಂತ ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಹೂಡಿಕೆ ಬರುವ ನಿರೀಕ್ಷೆಗಳಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
