ಬೆಂಗಳೂರು:
ಇದೇ ಫೆ 27ರಂದು ಬೆಳಗಾವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಹೈಟೆಕ್ ರೈಲ್ವೇ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆಂದು ತಿಳಿದುಬಂದಿದೆ.
ಬೆಳಗಾವಿಗೆ ಮೋದಿಯವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಜಿರಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದರು.
ಫೆ.27ರಂದು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ನಂತರ ಮಧ್ಯಾಹ್ನ 2.15ಕ್ಕೆ ಬೆಳಗಾವಿಗೆ ಆಗಮಿಸಿ ಬೆಳಗಾವಿಯ ಹೈಟೆಕ್ ರೈಲು ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದರೊಂದಿಗೆ ರೋಡ್ ಷೋ ನಡೆಸುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ.
ಜಿಲ್ಲಾ ಕ್ರೀಡಾಂಗಣ, ಸಿಪಿಎಡ್ ಮೈದಾನ, ಅಂಗಡಿ ಕಾಲೇಜು ಮೈದಾನ, ಯಡಿಯೂರಪ್ಪ ರಸ್ತೆ ಬಳಿಯ ಬಯಲು ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಸ್ಥಳವನ್ನು ಪರಿಶೀಲಿಸುತ್ತಿದ್ದೇವೆ. ಸಮಾವೇಶಕ್ಕೆ ಸೂಕ್ತ ಸ್ಥಳವನ್ನು ಆಯ್ಕೆ ಮಾಡಲಾಗುವುದು. ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈಗಾಗಲೇ ಸಭೆಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ