ಮೋದಿ ಜನರಿಗಾಗಿ ಅಲ್ಲದೆ ,ಮಿತ್ರ ಪಕ್ಷಗಳಿಗಾಗಿ ಕೆಲಸ ಮಾಡುತ್ತಿದ್ದಾರೆ : ದಯಾನಿಧಿ ಮಾರನ್‌

ಚೆನ್ನೈ: 

    ಕೇಂದ್ರ ಬಜೆಟ್ ನಲ್ಲಿ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಅನುದಾನ ಹಂಚಿಕೆಯನ್ನು ತೀವ್ರವಾಗಿ ಟೀಕಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಹೀಗೆ ರಾಜಕೀಯವಾಗಿ ಇಷ್ಟಪಡುವ, ಇಷ್ಟಪಡದ ರೀತಿಯಲ್ಲಿ ಆಡಳಿತ ಮುಂದುವರೆಸಿದರೆ ರಾಜಕೀಯ ಪ್ರತ್ಯೇಕತೆಯ ಅಪಾಯವಿದೆ ಎಂದು ಹೇಳಿದ್ದಾರೆ.

    ಮೋದಿ ತಮ್ಮ ಮಿತ್ರರನ್ನು ಸಮಾಧಾನಪಡಿಸಬಹುದು ಆದರೆ ಅವರು ದೇಶವನ್ನು ಉಳಿಸಲು ಸಾಧ್ಯವಿಲ್ಲ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಪಾದಿಸಿದ್ದಾರೆ.

   ಬಜೆಟ್‌ನಲ್ಲಿ ಕೇಂದ್ರವು ಇತರ ರಾಜ್ಯಗಳ ವಿರುದ್ಧ ತಾರತಮ್ಯ ಮಾಡಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದ ಬೆನ್ನಲ್ಲೇ ಸ್ಟಾಲಿನ್ ಈ ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿಮ್ಮನ್ನು ಸೋಲಿಸಿದವರಿಗೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

   “ನೀವು ಹೇಳಿದ್ದೀರಿ, ಚುನಾವಣೆ ಮುಗಿದಿದೆ, ಈಗ ನಾವು ದೇಶದ ಬಗ್ಗೆ ಯೋಚಿಸಬೇಕು. ಆದರೆ, ನಿನ್ನೆಯ ಬಜೆಟ್ 2024 ನಿಮ್ಮ ಆಡಳಿತವನ್ನು ಮಾತ್ರ ಉಳಿಸುತ್ತದೆ, ಭಾರತವನ್ನಲ್ಲ. ರಾಜಕೀಯ ಪಕ್ಷಪಾತ ಆಧಾರದ ಮೇಲೆ ಮೋದಿ ಆಡಳಿತ ಮುಂದುವರಿಸಿದರೆ, ಅವರು ಪ್ರತ್ಯೇಕಗೊಳ್ಳುವ ಅಪಾಯವಿದೆ ಎಂದು ಸ್ಟಾಲಿನ್ ಎಚ್ಚರಿಸಿದ್ದಾರೆ. ತಮಿಳುನಾಡಿಗೆ ಬಿಜೆಪಿ ದ್ರೋಹ ಬಗೆದಿದೆ ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ತಮ್ಮ ಫೋಸ್ಟ್ ನ್ನು ಮುಕ್ತಾಯಗೊಳಿಸಿದ್ದಾರೆ.

   ಕೇಂದ್ರ ಬಜೆಟ್ ನಲ್ಲಿ ತಮಿಳುನಾಡು ಬೇಡಿಕೆಗಳನ್ನು ನಿರ್ಲಕ್ಷಿಸಿರುವುದರ ವಿರುದ್ಧ ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಮಂಗಳವಾರ ಸ್ಟಾಲಿನ್ ಪ್ರಕಟಿಸಿದ್ದರು. ವಿಪತ್ತು ತಡೆಗೆ ರೂ.37,000 ಕೋಟಿ ಅನುದಾನ ಬಿಡುಗಡೆಗೆ ತಮಿಳುನಾಡು ಮನವಿ ಸಲ್ಲಿಸಿತ್ತು. ಆದರೆ ಕೇವಲ ರೂ.276 ಕೋಟಿ ಹಂಚಿಕೆ ಮಾಡಿದೆ. ಇದೇ ಬೇಡಿಕೆ ಇಟ್ಟಿದ್ದ ಬಿಹಾರಕ್ಕೆ 11,500 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

   ಈ ಮಧ್ಯೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಡಿಎಂಕೆ ನಾಯಕ ದಯಾನಿಧಿ ಮಾರನ್, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷಕ್ಕೆ ಮತ ಹಾಕಿದ ಜನರಿಗಾಗಿ ಕೆಲಸ ಮಾಡುತ್ತಿಲ್ಲ, ಆದರೆ ಅವರನ್ನು ಬೆಂಬಲಿಸುವ ಪಕ್ಷಗಳಿಗಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ. 2024-25ರ ಬಜೆಟ್ ಮಧ್ಯಮ ವರ್ಗದ ಜನರ ಆಶೋತ್ತರಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap