ಕಾಂಗ್ರೆಸ್ 50 ಸ್ಥಾನಗಳನ್ನು ಗೆಲ್ಲುವುದಿಲ್ಲ :ಮೋದಿ

ಪುಲ್ಭಾನಿ: 

     ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನಗಳನ್ನು ಗೆಲ್ಲುವುದಿಲ್ಲ ಮತ್ತು ಚುನಾವಣೆಯ ನಂತರ ವಿರೋಧ ಪಕ್ಷದ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

   ಒಡಿಶಾದ ಕಂಧಮಲ್ ಲೋಕಸಭಾ ಕ್ಷೇತ್ರದ ಫುಲ್ಬಾನಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ “ಡಬಲ್ ಇಂಜಿನ್” ಸರ್ಕಾರವನ್ನು ರಚಿಸಲಾಗುವುದು ಮತ್ತು “ಒಡಿಯಾ ಭಾಷೆ ಮತ್ತು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಮಣ್ಣಿನ ಮಗ ಅಥವಾ ಮಗಳನ್ನು” ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಪ್ರತಿಪಾದಿಸಿದರು

   ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರದ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಗಳನ್ನು ಸ್ಮರಿಸಿದ ಅವರು, 26 ವರ್ಷಗಳ ಹಿಂದೆ ಇದೇ ದಿನದಂದು ಪೋಖ್ರಾನ್ ಪರೀಕ್ಷೆಗಳು ವಿಶ್ವದಾದ್ಯಂತ ದೇಶದ ವರ್ಚಸ್ಸನ್ನು ಹೆಚ್ಚಿಸಿವೆ ಎಂದು ಹೇಳಿದರು. ತಮ್ಮ ಸರ್ಕಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಮೂಲಕ 500 ವರ್ಷಗಳ ಜನರ ಕಾಯುವಿಕೆಯನ್ನು ಕೊನೆಗೊಳಿಸಿದೆ ಎಂದು ಅವರು ಪ್ರತಿಪಾದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap