ವಾರಣಾಸಿ:
ಪ್ರಧಾನಿ ನರೇಂದ್ರ ಮೋದಿ ಅವರು ತಾವು ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಒಂದು ದಿನ ಮೊದಲು ಸೋಮವಾರ ಸಂಜೆ ಆರು ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ.
ಇಂದು ಸಂಜೆ ವಾರಣಾಸಿಯಲ್ಲಿ ರೋಡ್ ಶೋ ನಡೆಸುವ ಪ್ರಧಾನಿ ಮೋದಿ, ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಸುವ ಮುನ್ನ ಗಂಗಾನದಿಯಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಏಳನೇ ಮತ್ತು ಕೊನೆಯ ಹಂತದಲ್ಲಿ ಜೂನ್ 1 ರಂದು ವಾರಣಾಸಿಯಲ್ಲಿ ಮತದಾನ ನಡೆಯಲಿದ್ದು, ಪ್ರಧಾನಿ ಮೋದಿ ಸತತ ಮೂರನೇ ಅವಧಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.
5,000ಕ್ಕೂ ಹೆಚ್ಚು ಮಹಿಳೆಯರು ಪ್ರಧಾನಿ ಮೋದಿ ರೋಡ್‌ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿವರು ಮತ್ತು ಶಾಸಕರು ಭಾಗವಹಿಸಲಿದ್ದಾರೆ.
ಮರಾಠಿ, ಗುಜರಾತಿ, ಬೆಂಗಾಲಿ, ಮಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸೇರಿದಂತೆ ವಿವಿಧ ಸಮುದಾಯಗಳ ಜನರು ರೋಡ್‌ಶೋನ 11 ವಲಯಗಳಲ್ಲಿ 100 ಪಾಯಿಂಟ್‌ಗಳಲ್ಲಿ ಮೋದಿಯನ್ನು ಸ್ವಾಗತಿಸಲಿದ್ದಾರೆ ಎಂದು ಬಿಜೆಪಿ ಪದಾಧಿಕಾರಿಗಳು ತಿಳಿಸಿದ್ದಾರೆ.ರಾತ್ರಿ BLW ಗೆಸ್ಟ್‌ಹೌಸ್‌ನಲ್ಲಿ ಪ್ರಧಾನಿ ಮೋದಿ ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ