ಕೆ.ಎಸ್.ಈಶ್ವರಪ್ಪನವರ ಪಕ್ಷ ನಿಷ್ಠೆ ಪ್ರಶಂಸೆ ವ್ಯಕ್ತಪಡಿಸಿದ ಮೋದಿ

ಬೆಂಗಳೂರು

       ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪನವರ ಪಕ್ಷ ನಿಷ್ಠೆಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಇಂದು ಬೆಳಿಗ್ಗೆ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿರುವ ಮೋದಿ, ಪಕ್ಷ ಸದಾ ನಿಮ್ಮ ಜೊತೆಗಿರುತ್ತದೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ಕುರಿತು ಮೋದಿ ಚರ್ಚೆ ನಡೆಸಿದರು.

      ಸಾಮಾನ್ಯ ಕಾರ್ಯಕರ್ತರೊಂದಿಗೆ ಪ್ರಧಾನಿ ಯವರು ಮಾತನಾಡುತ್ತಿರುವುದು ಸಂತೋಷ ತಂದಿದೆ. ಸಂಘಟನೆ ಹಾಗೂ ನಿಮ್ಮೊಂದಿಗೆ ಸದಾ ನಾನು ಇರುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.

     ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿಯಾಗಿದೆ. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ ಎಂದ ಹೇಳಿದರು.

    ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುವಂತೆ ಪಕ್ಷ ವರಿಷ್ಠರು ಯಾವುದೇ ಮರು ಮಾತಾಡದೇ ಪಕ್ಷದ ಆದೇಶವನ್ನು ಪಾಲಿಸಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು.

    ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್‌ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap