ನೂತನ ಸಂಸತ್‌ ಭವನದ ವೀಡಿಯೋ ಹಂಚಿಕೊಂಡ ಮೋದಿ

ನವದೆಹಲಿ:

         ನೂತನ ಸಂಸತ್ ಭವನದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ.ತಮ್ಮ ಟ್ವೀಟರ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಮೋದಿ, ‘ನಮ್ಮ ಸಂಸತ್ ನಮ್ಮ ಹೆಮ್ಮೆ’ಎಂಬ ಹ್ಯಾಶ್‌ಟ್ಯಾಗ್ ಬಳಸಿ ತಮ್ಮ ಧ್ವನಿಯೊಂದಿಗೆ ವೀಡಿಯೊವನ್ನು ಹಂಚಿಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದಾರೆ. 

ನೂತನ ಸಂಸತ್ ಭವನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ. ಈ ವೀಡಿಯೊ ಭವ್ಯ ಕಟ್ಟಡದ ನೋಟವನ್ನು ನೀಡುತ್ತದೆ. ಇದನ್ನು ನಿಮ್ಮ ಸ್ವಂತ ಧ್ವನಿಯೊಂದಿಗೆ ಹಂಚಿಕೊಳ್ಳಿ, ಅವುಗಳಲ್ಲಿ ಕೆಲವನ್ನು ನಾನು ಮರು ಟ್ವೀಟ್ ಮಾಡುತ್ತೇನೆ. #MyParliamentMyPride ಬಳಸಲು ಮರೆಯಬೇಡಿ’ ಎಂದು ಪ್ರಧಾನಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ