ನವದೆಹಲಿ:
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಾಹ್ನ 12 ಗಂಟೆಗೆ ಚಂಡೀಗಢಕ್ಕೆ ತೆರಳಿ ನಿನ್ನೆ ನಿಧನರಾದ ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.
ಪಂಜಾಬ್ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನದ ನಂತರ ಅವರ ಅನುಯಾಯಿಗಳು ಮತ್ತು ಬೆಂಬಲಿಗರು ತಮ್ಮ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಚಂಡೀಗಢದ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆಯಿಂದಲೇ ಜಮಾಯಿಸಲಿದ್ದಾರೆ.
ಪಕ್ಷದ ನಾಯಕರ ಪ್ರಕಾರ, ಅಂತಿಮ ದರ್ಶನಕ್ಕಾಗಿ ಬಾದಲ್ ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ 10:00 ರಿಂದ ಮಧ್ಯಾಹ್ನದವರೆಗೆ ಚಂಡೀಗಢದ ಎಸ್‌ಎಡಿ ಕಚೇರಿಯಲ್ಲಿ ಇರಿಸಲಾಗುವುದು ಎಂದು ತಿಳಿಸಿದ್ದಾರೆ.
95 ವರ್ಷದ ಹಿರಿಯ ಬಾದಲ್ ಅವರ ಅಂತ್ಯ ಸಂಸ್ಕಾರ ನಾಳೆ ಮಧ್ಯಾಹ್ನ 1 ಗಂಟೆಗೆ ಅವರ ಪೂರ್ವಜರ ಗ್ರಾಮವಾದ ಬಾದಲ್‌ನಲ್ಲಿ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ