ನವದೆಹಲಿ:
ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ
72 ಸಚಿವರೊಂದಿಗೆ ಇಂದು ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಜವಾಹರಲಾಲ್ ನೆಹರೂ ಬಳಿಕ ಮೂರನೇ ಬಾರಿಗೆ ಮೋದಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. 72 ಸಚಿವರ ಪೈಕಿ 32 ಕ್ಯಾಬಿನೆಟ್ ಸಚಿವರು, 5 ಸ್ವತಂತ್ರ ಮತ್ತು 36 ರಾಜ್ಯ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
73ರ ಹರೆಯದ ಮೋದಿ ಅವರು ಎನ್ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ಮೋದಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ಮೋದಿ ನಂತರ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸಿದರು.
ಇವರ ಬಳಿಕ ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ
![](https://prajapragathi.com/wp-content/uploads/2023/08/moddi.jpg)