ಪಾಕ್ ಪ್ರಧಾನಿಗೆ ಭಾರತದ ತರಾಟೆ: ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಟೀಕಿಸಿದ್ದಕ್ಕೆ ವ್ಯಂಗ್ಯ

ನವದೆಹಲಿ:

 ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರ ಬಗ್ಗೆ ಹೇಳಿಕೆ ನೀಡಿದ ಪಾಕಿಸ್ತಾನದ ಪ್ರಧಾನಿಯನ್ನು ಭಾರತ ತರಾಟೆಗೆ ತೆಗೆದುಕೊಂಡಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರ ಬಗ್ಗೆ ಪಾಕಿಸ್ತಾನ ಟೀಕಿಸಿತ್ತು.

    ಪಾಕಿಸ್ತಾನ ಪ್ರಧಾನಿ ಇದೊಂದು ಸ್ಥಳೀಯ ಭೇಟಿ ಎಂದು ಹೇಳಿದ್ದು, ಅವರನ್ನು ಭಾರತ ತರಾಟೆಗೆ ತೆಗೆದುಕೊಂಡಿದೆ.ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಇಸ್ಲಾಮಾಬಾದ್ ಗೆ ಯಾವುದೇ ಸ್ಥಾನವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದು, ಪ್ರಧಾನಿ ಮೋದಿ ಅವರಿಗೆ ದೊರೆತ ಸ್ವಾಗತ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಬದಲಾವಣೆಗಳು ಪಾಕಿಸ್ತಾನದ ಯಾವುದೇ ಟೀಕೆ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರಗಳಾಗಿವೆ ಎಂದು ತಿಳಿಸಿದ್ದಾರೆ.

15ನೇ ದಿನದಲ್ಲೂ ನಿಲ್ಲದ ‘KGF 2’ : ಇದೇ ವೀಕೆಂಡ್‌ನಲ್ಲಿ ದಾಟುತ್ತಾ 1000 ಕೋಟಿ?

     ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಪ್ರಧಾನಿ ಭೇಟಿಯನ್ನು ಸ್ಥಳೀಯ ಭೇಟಿ ಎಂದು ಟೀಕಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅರಿಂದಮ್ ಬಾಗ್ಚಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಗುತ್ತದೆ ಎಂಬುದರ ಕುರಿತು ಮಾತನಾಡಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ.

ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಸಂದರ್ಭದಲ್ಲಿ ದೊರೆತ ಸ್ವಾಗತ ಮತ್ತು ಅವರು ಉದ್ಘಾಟಿಸಿದ ಅಭಿವೃದ್ಧಿ ಯೋಜನೆಗಳು, ಅಲ್ಲಿ ಆಗಿರುವ ಬದಲಾವಣೆಗಳು ಯಾವುದೇ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರಗಳಾಗುತ್ತವೆ ಎಂದು ಅವರು ತಿಳಿಸಿದ್ದಾರೆ.

 ಕೋವಿಡ್‌ 4ನೇ ಅಲೆ ಭೀತಿ : ರಾಜ್ಯದಲ್ಲಿ ಸವಾಲಾದ ‘ಜೀನೋಮ್ ಅನುಕ್ರಮ ಪರೀಕ್ಷೆ’

ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಆರ್ಟಿಕಲ್ 370 ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಇದು ಅವರ ಮೊದಲ ಪ್ರಮುಖ ಭೇಟಿಯಾಗಿದೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link