ಜೈಪುರ
ರಾಜಸ್ಥಾನ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಂದೇ ಭಾರತ್ ರೈಲು ಇಂದಿನಿಂದ ಕಾರ್ಯಾರಂಭಗೊಳ್ಳಲಿದೆ.
ಜನರಿಗೆ ಸುರಕ್ಷಿತ, ಉತ್ತಮ ಮೂಲ ಸೌಲಭ್ಯದ ವೇಗದ ರೈಲು ಸೇವೆ ನೀಡುವ ಉದ್ದೇಶದಿಂದ ರಾಜ್ಯಸ್ಥಾನದಲ್ಲಿ ಮೊದಲನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಚಾಲನೆ ನೀಡಲಿದ್ದಾರೆ. ರಾಜಸ್ಥಾನದಲ್ಲಿ ಇಂದು ಲೋಕಾರ್ಪಣೆಗೊಳ್ಳುತ್ತಿರುವ ರೈಲು ವಿಶ್ವದ ಮೊದಲ ‘ಸೆಮಿ ಹೈ ಸ್ಪೀಡ್’ ರೈಲು ಆಗಿದೆ.
ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ರಾಷ್ಟ್ರ ರಾಜಧಾನಿ ದೆಹಲಿಯ ಕಂಟೋನ್ಮೆಂಟ್ ಮತ್ತು ಅಜ್ಮೀರ್ ಮಧ್ಯೆ ಪ್ರಯಾಣಿಕರಿಗೆ ಸಂಚಾರ ಸೇವೆ ನೀಡಲಿದೆ. ವೇಳಾಪಟ್ಟಿಯ ಪ್ರಕಾರ, ಈ ಎರಡು ನಗರಗಳ ಮಧ್ಯೆದ ಅಂತರವನ್ನು ಈ ರೈಲು ಕೇವಲ 5 ಗಂಟೆ 15 ನಿಮಿಷಗಳಲ್ಲಿ ಕ್ರಮಿಸಲಿದೆ ಎಂದು ಎಎನ್‌ಐ ವರದಿ ಮಾಡಿದೆ.
ದೆಹಲಿಯ ಕಂಟೋನ್ಮೆಂಟ್ ಮತ್ತು ಅಜ್ಮೀರ್ ಮಧ್ಯೆದ ಅದೇ ಮಾರ್ಗದಲ್ಲಿ ಪ್ರಸ್ತುತ ವೇಗದ ರೈಲು ಶತಾಬ್ದಿ ಎಕ್ಸ್‌ಪ್ರೆಸ್ ರೈಲು 6 ಗಂಟೆ 15 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಈ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಅದೇ ಮಾರ್ಗದಲ್ಲಿ ಪ್ರಸ್ತುತ ಹಾಲಿ ರೈಲಿನ ವೇಗಕ್ಕಿಂತ 60 ನಿಮಿಷಗಳಷ್ಟು ಹೆಚ್ಚು ವೇಗ ಹೊಂದಿದೆ.
ಒಟ್ಟಾರೆ ನೋಡುವುದಾದರೆ ರಾಜಸ್ಥಾನದ ಮೊದಲ ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅಜ್ಮೀರ್-ದೆಹಲಿ ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶ್ವದ ಮೊದಲ ಅರೆ-ಹೈ-ಸ್ಪೀಡ್ ಪ್ಯಾಸೆಂಜರ್ ರೈಲು ಸಹ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ