ಇಂದು ಬೆಂಗಳೂರಿನಲ್ಲಿ ಮೋದಿ ಮತ ಬೇಟೆ….!

ಬೆಂಗಳೂರು

     ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರವನ್ನ ನಡೆಸಿದ್ದದಾರೆ. ರಾಜ್ಯದ 28 ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಈ ಬಾರಿ ಶತಾಯ ಗತಾಯ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ ಠಕ್ಕರ್‌ ಕೊಡಲು ಮೈತ್ರಿ ನಾಯಕರು ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೂಲಕ ಮತಬೇಟೆಗೆ ಕಮಲ-ದಳ ನಾಯಕರು ಮುಂದಾಗಿದ್ದಾರೆ.

     ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್​ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇನ್ನೂ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬಿಗಿ ಪೊಲೀಸ್​ ಬಂದೂಬಸ್ತ್ ಮಾಡಲಾಗಿದೆ. ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದ್ದು, ಬಂದೋಬಸ್ತ್​​ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್​ ಕಾನ್ಸ್​ಟೇಬಲ್​, ಪೊಲೀಸ್​ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

    ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆ ಅರಮನೆ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದ್ದು, ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ. ಇದರ ಜೊತೆಗೆ ಅರಮನೆ ಮೈದಾನ ಹಾಗೂ ಹೆಚ್​ಕ್ಯೂಟಿಸಿ ಸುತ್ತಮುತ್ತ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 10ರಿಂದ ರಾತ್ರಿ 8 ಗಂಟೆಯವರೆಗೆ ನೋ ಫ್ಲೈ ಜೋನ್ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.

   ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶದ ಹಿನ್ನೆಲೆ ಇಂದು(ಶನಿವಾರ) ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಈ ಹಿನ್ನಲೆ ವಾಹನ ಸವಾರರಿಗೆ ಅಡಚಣೆಯಾಗದಂತೆ ಸಂಚಾರಿ ಪೊಲೀಸರು ನಗರದ ಹನ್ನೊಂದು ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಲು ವಾಹನ ಸಂಚಾರರಿಗೆ ಸೂಚನೆ ನೀಡಿಲಾಗಿದೆ.

   ಪ್ಯಾಲೇಸ್ ರಸ್ತೆ, ಜಯಮಹಲ್, ರಮಣಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಖ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಪರ್ಯಾಯ ಮಾರ್ಗವಾಗಿ ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap