ಹೊಸಪೇಟೆಯ ರೈಲ್ವೆ ನಿಲ್ದಾಣ ಉದ್ಗಾಟಿಸಲಿರುವ ಮೋದಿ…!

ಹಂಪಿ

     13 ಕೋಟಿ ವೆಚ್ಚದಲ್ಲಿ ಊನ್ನತದರ್ಜೆಗೆರಿಸಿದ ಹೊಸಪೇಟೆಯ ರೈಲ್ವೆ ನಿಲ್ದಾಣವನ್ನು ಸಹ ಲೋಕಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ (ಮಾರ್ಚ್ 12) ಕರ್ನಾಟಕದಲ್ಲಿ ಪ್ರವಾಸ ಮಾಡಲಿದ್ದು, ಈ ವೇಳೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹಾಗೂ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸಾರುವ ವಿನೂತನ ಶೈಲಿಯ ಹೊಸಪೇಟೆ ರೈಲ್ವೆ ನಿಲ್ದಾಣವನ್ನು ಸಹ ಉದ್ಘಾಟನೆ ಮಾಡಲಿದ್ದಾರೆ.
    ಗತವೈಭವ ಸಾರುವ ರೈಲ್ವೆ ನಿಲ್ದಾಣ ಈ ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ವಿಜಯನಗರ ಸಾಮ್ರಾಜ್ಯದ ಸಮಯದಲ್ಲಿ ಚಲಾವಣೆಯಲ್ಲಿದ್ದ ನಾಣ್ಯಗಳ ಮಾಹಿತಿಯನ್ನು ನೀಡಲಾಗಿದ್ದು, ಇವುಗಳು ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸಾರುವಂತಿವೆ. ಇನ್ನು ರೈಲು ನಿಲ್ದಾಣದ ಮುಂಭಾಗದಲ್ಲಿ ಹಂಪಿ ಕಲ್ಲಿನ ರಥಗಳ ಮಾದರಿಯಲ್ಲಿರುವ ಪ್ರವೇಶ ದ್ವಾರಗಳು ನೋಡುಗರನ್ನು ಮನಸೋರೆಗೊಳಿಸುವಂತಿವೆ.
    ಮೋದಿಯವರಿಂದ ಕರ್ನಾಟಕ ಪ್ರವಾಸ ಒಟ್ಟಾರೆಯಾಗಿ ಹೇಳುವುದಾದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸವು, ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆಗೆ ಸಾಕ್ಷಿಯಾಗಲಿದೆ. ಇನ್ನು ಅಂದೇ ಹಲವು ಕಾರ್ಯಕ್ರಗಳಲ್ಲಿ ಭಾಗಿಯಾಗಲಿರುವ ಅವರು, ಹಾಗೆಯೇ ಹುಬ್ಬಳ್ಳಿಯ ಶ್ರೀ ಸಿದ್ಧರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ ಅನ್ನು ಕೂಡ ಉದ್ಘಾಟನೆ ಮಾಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap