ರಾಜ್ಯೋತ್ಸವಕ್ಕೆ ಕನ್ನಡದಲ್ಲಿಯೇ ಶೂಭಕೋರಿದ ಪ್ರಧಾನ ಮಂತ್ರಿ..!

ಬೆಂಗಳೂರು:

   69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.

   ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಹೇಳಿದ್ದಾರೆ. ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸುವರ್ಣ ಕರ್ನಾಟಕ ವರ್ಷಚಾರಣೆಯನ್ನು ಜನೋತ್ಸವವಾಗಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.

   ರಾಜ್ಯೋತ್ಸವ ಪ್ರಶಸ್ತಿ ಜೊತೆಗೆ, ಕರ್ನಾಟಕ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಕೂಡ ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ.

Recent Articles

spot_img

Related Stories

Share via
Copy link