ಮಂಗಳೂರು:
ಇಡೀ ರಾಜ್ಯವೇ ಒಂದು ಸಾರಿ ಭಯಭ್ರಾಂತರಾಗಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಉಗ್ರ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ.
ಸ್ಫೋಟದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಎರಡೂವರೆ ತಿಂಗಳ ಬಳಿಕ ಇಂದು ಆತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾರಿಕ್ ನನ್ನು ಎನ್ಐಎ ಬೆಂಗಳೂರಿನ ವಿಶೇಷ ಎನ್ಐಎ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆತನನ್ನು 10 ದಿನಗಳ ಎನ್ಐಎ ಕಸ್ಟಡಿಗೆ ನೀಡಿದೆ.
2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೈಯಲ್ಲಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡು ಶಾರಿಕ್ ಗಾಯಗೊಂಡಿದ್ದನು. ಆತನೊಂದಿಗೆ ಆಟೋ ರಿಕ್ಷಾ ಚಾಲಕನೂ ಗಾಯಗೊಂಡಿದ್ದು, ಆರೋಪಿಗೆ ಶೇ 40ರಷ್ಟು ಸುಟ್ಟ ಗಾಯಗಳಾಗಿತ್ತು.