ನಾಯಕನಹಟ್ಟಿ.
ಮುಂಬರುವರಾಜ್ಯ ಸಚಿವ ಸಂಪುಟದಲ್ಲಿ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ 7 ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ರವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಬಸವರಾಜ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಒತ್ತಾಯಿಸಿದ್ದಾರೆ.
ಸಮೀಪದ ಗೌರಿಪುರ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೀನ ದಲಿತರ ಬಗ್ಗೆ ಅಪಾರವಾದ ಕಾಳಜಿ ವಹಿಸುತ್ತಿದ್ದಾರೆ.
ಸರಳ ಸಜ್ಜನಿಕೆ ವ್ಯಕ್ತಿ ಆಗಿದ್ದಾರೆ ಇವರಿಗೆ ಮಂತ್ರಿ ಸ್ಥಾನವನ್ನು ನೀಡಿದರೆ ಕರ್ನಾಟಕ ರಾಜ್ಯ ಮಾದರಿ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಹೇಳಿದರು.ಅವರಿಗೆ ಮಂತ್ರಿಸ್ಥಾನ ಕೊಡದೆ ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸಿದರು.
ಕ್ಷೇತ್ರದ ಅಭಿವೃದ್ಧಿಗಾಗಿ ಹಗಲು ಇರುಳು ಶ್ರಮಿಸುತ್ತಾರೆ ಎಂದು ಅವರು ಮಾತನಾಡಿದರು.








