ಮೈಸೂರು:
‘ಮಹಿಷಾ ದಸರೆ ಹೆಸರಿನಲ್ಲಿ ರಾಕ್ಷಸನ ಹಬ್ಬ ಆಚರಿಸಲು ಕೆಲವರು ಹೊರಟಿದ್ದಾರೆ. ಜನರ ಭಾವನೆಗಳಿಗೆ ಧಕ್ಕೆ ತರುವ ಇಂಥ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಸಂಸದ ಪ್ರತಾಪಸಿಂಹ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.
ನಾಡಹಬ್ಬ ದಸರಾ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದು ಜನರ ಭಾವನೆಗೆ ಸಂಬಂಧಿಸಿದ ವಿಚಾರ. ಮಹಿಷ ಎಂದರೆ ಎಮ್ಮೆ. ಅದನ್ನು ಚಾಮುಂಡೇಶ್ವರಿಗಿಂತ ಶ್ರೇಷ್ಠ ಎನ್ನುವಂತೆ ಬಿಂಬಿಸುವ ಪ್ರಯತ್ನ ನಡೆದಿದೆ. ಇದನ್ನ ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೆ ತರಬೇಕಾಗಿತ್ತು. ಇದನ್ನು ರಾಜಕೀಯ ಕಾರಣಗಳಿಗಾಗಿ ಪ್ರಸ್ತಾಪಿಸುತ್ತಿಲ್ಲ ಎಂದು ತಿಳಿಸಿದರು.
ಟಿಪ್ಪು ಮೈಸೂರು ಮಹಾರಾಜರಿಗೆ ತೊಂದರೆ ಕೊಟ್ಟಿದ್ದರು. ಹೀಗಾಗಿ ಟಿಪ್ಪು ಜಯಂತಿಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಮನವಿ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ