ಯುದ್ಧ ವಿಮಾನ ತೇಜಸ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ

ಬೆಂಗಳೂರು:

      ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಏರೋ ಇಂಡಿಯಾ ಶೋದಲ್ಲಿ ತೇಜಸ್ ಯುದ್ಧ ವಿಮಾನ ಏರಿ ಸಂಸದ ತೇಜಸ್ವಿ ಸೂರ್ಯ ಸುಮಾರು 15 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸಿದರು. 

      ಬುಧವಾರ ಯಲಹಂಕ ವಾಯುನೆಲೆಯಲ್ಲಿ ಆರಂಭಗೊಂಡ ಏರೋ ಇಂಡಿಯಾ ಶೋ ಇಂದು ಎರಡನೇ ದಿನವಾಗಿದೆ. ಇಂದು ಏರೋ ಇಂಡಿಯಾ ಶೋದಲ್ಲಿ ಭಾಗಿಯಾದ ತೇಜಸ್ವಿ ಸೂರ್ಯ, ತೇಜಸ್ ಯುದ್ಧ ವಿಮಾನದಲ್ಲಿ ಕೂತು12.20ರಿಂದ 12.50ರವರೆಗೆ ಸುಮಾರು 30 ನಿಮಿಷಗಳ ಕಾಲ ಬಾನಂಗಳದಲ್ಲಿ ಹಾರಾಟ ನಡೆಸಿದ್ದಾರೆ.

       ಕೇಂದ್ರ ಸರ್ಕಾರ ಹೆಚ್‌ಎಎಲ್​ನಿಂದ 48 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ತೇಜಸ್ ವಿಮಾನಗಳನ್ನು ಖರೀದಿಸಲು ನಿರ್ಧರಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ ತೇಜಸ್ವಿಯವರು, ಈ ಹಾರಾಟ ಅದ್ಭುತವಾದ ಅನುಭವ ನೀಡಿದೆ, ಇದನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. 15 ಸಾವಿರ ಎತ್ತರದಲ್ಲಿ ಒಂದು ಸಾವಿರ ಕಿಲೋ ಮೀಟರ್ ವೇಗದಲ್ಲಿ ಹಾರಾಟ ಮಾಡಿರುವುದು ತುಂಬಾ ಖುಷಿ ತಂದಿದೆ ಎಂದರು.

ದೇಶೀಯವಾಗಿ ತಯಾರಾಗಿರುವ ತೇಜಸ್ ವಿಮಾನವನ್ನು ಖರೀದಿಸುವ ಮೂಲಕ ಬೆಂಗಳೂರು ನಗರವನ್ನು ವಿಶ್ವಮಟ್ಟದ ತಂತ್ರಜ್ಞಾನ ಮತ್ತು ರಕ್ಷಣಾ ಕ್ಷೇತ್ರದ ಅಗ್ರಗಣ್ಯ ನಗರವನ್ನಾಗಿ ಮಾರ್ಪಡಿಸಲು ಪಣತೊಟ್ಟಿರುವ ಸರ್ಕಾರದ ಕ್ರಮ ಸ್ವಾಗತಾರ್ಯ ಎಂದರು. ಎಲ್​ಸಿಎ ಏರ್​ಕ್ರಾಫ್ಟ್ ಭಾರತದವರೇ ನಿರ್ಮಾಣ ಮಾಡಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮದಿಂದಾಗಿ ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವಾಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾಗೆ ಉತ್ತೇಜನ ಸಿಗಲಿದೆ ಎಂದು ಹೇಳಿದರು.

     ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರೋ ಶೋ ಇದಾಗಿದ್ದು, ಈ ಪ್ರದರ್ಶನದಲ್ಲಿ 540 ಸ್ವದೇಶಿ ಪ್ರದರ್ಶಕರು ಮತ್ತು 77 ವಿದೇಶಿ ಪ್ರದರ್ಶಕರು ಭಾಗಿಯಾಗುವ ನಿರೀಕ್ಷೆ ಇದೆ. ಪ್ರತಿ ದಿನ ಭಾರತ, ವಿದೇಶಗಳ ಒಟ್ಟು 63 ವಿಮಾನಗಳ ಪ್ರದರ್ಶನ ನಡೆಯಲಿದೆ.

 

Recent Articles

spot_img

Related Stories

Share via
Copy link
Powered by Social Snap