ಮುಡಾ ಹಗರಣ : ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು : ಬಿ ಎಸ್‌ ವೈ

ಬೆಂಗಳೂರು:

   ಮುಡಾ ಹಗರಣದ  ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತೇವೆ. ಪ್ರತಿಯೊಂದು ಕಡೆ 8 ರಿಂದ 10 ಸಾವಿರ ಜನ ಸೇರುತ್ತಾರೆಂಬ ವಿಶ್ವಾಸ ಇದೆ. ಸಿದ್ದರಾಮಯ್ಯ ಅವರಿಗೆ ಇದು ಕೊನೆ ಅವಕಾಶ. ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

   ರಾಜೀನಾಮೆ ಅವರಾಗಿಯೇ ಕೊಟ್ಟರೆ ಅವರಿಗೆ ಅದು ಶೋಭೆ ತರುತ್ತದೆ, ಪಕ್ಷಕ್ಕೆ ಗೌರವ ಸಿಗುತ್ತದೆ. ಇಲ್ಲದಿದ್ದರೆ ಅನಿವಾರ್ಯವಾಗಿ ರಾಜ್ಯಪಾಲರೇ ಕ್ರಮ ತೆಗೆದುಕೊಳ್ಳಬಹುದು. ಇದಕ್ಕೆ ಅವಕಾಶ ಕೊಡದೇ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಸಲಹೆ ಕೊಡುತ್ತೇನೆ ಎಂದರು.  ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಗತ್ತಿಗೆ ವಾಸ್ತವ ಸ್ಥಿತಿ ತಿಳಿದಿದೆ. ಹೀಗಾಗಿ ಅವರು ಯಾವುದೇ ಆರೋಪಗಳಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ.

    ರಾಜ್ಯಪಾಲ ಕಚೇರಿ ದುರ್ಬಳಕೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ವಾಸ್ತವಿಕ ಸತ್ಯ ಸಂಗತಿ ದೇಶದ ಜನರಿಗೆ ಗೊತ್ತಿದೆ. ಈ ರೀತಿಯ ಆರೋಪ ಮಾಡುವುದರಿಂದ ಅವರು ಆರೋಪದಿಂದ ಮುಕ್ತ ಆಗಲು ಆಗುವುದಿಲ್ಲ. ಈ ರೀತಿಯ ಮಾತುಗಳಿಂದ ಅವರು ಬಚಾವ್ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.  

Recent Articles

spot_img

Related Stories

Share via
Copy link
Powered by Social Snap