ಮುಡಾದ ಮತ್ತೊಂದು ಹಗರಣ ಬಯಲು….!

ಮೈಸೂರು

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ  ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮೈಸೂರಿನ ವಿಜಯನಗರದಲ್ಲಿ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಬೆಲೆಬಾಳುವ 23 ನಿವೇಶನಗಳನ್ನು ಕೇವಲ 3 ಸಾವಿರ ರೂ.ಗೆ ಮಾರಾಟ ಮಾಡಿರುವ ಆರೋಪ ಮುಡಾದ ವಿರುದ್ಧ ಕೇಳಿಬಂದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.

   ಇನ್ನು, ಕ್ರಯ ಪತ್ರದಲ್ಲಿ ಮಂಜುನಾಥ್​ ಯಾವ ಭೂಮಿ ಕಳೆದುಕೊಂಡಿದ್ದರೆ ಎಂಬ ಮಾಹಿತಿ ಇಲ್ಲ. ಆದರೆ, ಪ್ರೋತ್ಸಾಹದಾಯಕ ಎಂದು ನಮೂದಿಸಿ ನಿವೇಶನಗಳನ್ನು ನೀಡಲಾಗಿದೆ. 5 ಲಕ್ಷ ಶುಲ್ಕ ಪಾವತಿ ಸ್ಥಳದಲ್ಲಿ ಕೇವಲ 600 ರೂಪಾಯಿ ಪಾವತಿ ಮಾಡಿಸಿಕೊಂಡು ನಿವೇಶನ ನೀಡಲಾಗಿದೆ.
   ಮುಡಾ ಭ್ರಷ್ಟಾಚಾರದ ಬಗ್ಗೆ ಒಂದು ವರ್ಷದ ಹಿಂದೆಯೇ ಕೃಷ್ಣ ಎಂಬವರು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ವಿಶೇಷ ತಹಶೀಲ್ದಾರ್ ಶಿವಕುಮಾರ್, ಹೆಚ್ಚುವರಿ ಜಿಲ್ಲಾ ನೋಂದಣಾಧಿಕಾರಿ ಶ್ರೀಮತಿ.ಕಾವ್ಯ, ರಿಯಲ್ ಎಸ್ಟೇಟ್ ಉದ್ಯಮಿ ಎನ್.ಮಂಜುನಾಥ್ ವಿರುದ್ಧ ದೂರು ದಾಖಲಿಸಿದ್ದರು.

ಪ್ರಾಧಿಕಾರದ ಸದಸ್ಯರುಗಳು, ಅಧಿಕಾರಿಗಳು, ನೌಕರರುಗಳು ಮತ್ತು ತಪ್ಪಿತಸ್ಥರುಗಳ ವಿರುದ್ಧ ಕಾನೂನು ಕ್ರಮಕ್ಕೆ ದೂರುದಾರ ಪರ ವಕೀಲ ರವಿಕುಮಾರ್ ಒತ್ತಾಯಿಸಿದ್ದಾರೆ.

Recent Articles

spot_img

Related Stories

Share via
Copy link