ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ : ವಿಚಾರಣೆ ಆ.29ಕ್ಕೆ ಮುಂದೂಡಿಕೆ

ಬೆಂಗಳೂರು

   ಕರ್ನಾಟಕ ಹೈಕೋರ್ಟ್ ನಲ್ಲಿ ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಇದೇ ವೇಳೆ ಜನಪ್ರತಿನಿಧಿಗಳ ಕೋರ್ಟ್​ನ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಸೂಚಿಸಿದ್ದು ಈ ಮೂಲಕ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 

   ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆ ಮುಂದೂಡಿದರು.

  ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಇಂದು (ಆಗಸ್ಟ್​ 19) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಆಗಸ್ಟ್ 29ಕ್ಕೆ  ಅರ್ಜಿ ವಿಚಾರಣೆ ಮುಂದೂಡಿದೆ. ಅಲ್ಲದೇ ಜನಪ್ರತಿನಿಧಿಗಳ ಕೋರ್ಟ್​ನ ಆದೇಶವನ್ನು ಆ.29ಕ್ಕೆ ಮುಂದೂಡುವಂತೆ ಸೂಚಿಸಿದೆ,. ಈ ಮೂಲಕ ಸಿದ್ದರಾಮಯ್ಯ ನಾಳಿನ ಬೀಸುವ ದೊಣ್ಣೆಯಿಂದ ಪಾರಾದಂತಾಗಿದೆ.

Recent Articles

spot_img

Related Stories

Share via
Copy link