ಮುಡಾ ಹಗರಣ : ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಬಿಜೆಪಿ ಆಗ್ರಹ

ಬೆಂಗಳೂರು:

    ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಕುತೂಹಲಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲು ಮಾಡಲು ಅನುಮತಿ ನೀಡುತ್ತಾರಾ, ಇಲ್ಲವೇ? ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ.

    ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆಗಳನ್ನು ನೀಡಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಬೆನ್ನಲ್ಲೇ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದರು. ಅಲ್ಲದೆ ಪ್ರಕರಣ ದಾಖಲು ಮಾಡಲು ಅನುಮತಿ ಏಕೆ ನೀಡಬಾರದು? ಎಂದೂ ಪ್ರಶ್ನಿಸಿದ್ದರು. ಇದು ರಾಜಕೀಯವಾಗಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

   ಹಗರಣ ಪ್ರಕರಣ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ಮಿತ್ರ ಪಕ್ಷಗಳು ಕೈಗೊಂಡಿದ್ದ ಪಾದಯಾತ್ರೆ ಪೂರ್ಣಗೊಂಡಿದ್ದು, ಇದೀಗ ಪ್ರತಿಪಕ್ಷಗಳು ಮಳೆ ಅವಾಂತರ ವಿಚಾರದತ್ತ ಗಮನಹರಿಸಿ, ಸರ್ಕಾರದವನ್ನು ತರಾಟೆಗೆ ತೆಗೆದುಕೊಂಡಿದೆ.

    ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿದ್ದ ನೋಟಿಸ್ ವಾಪಸ್ ಪಡೆದುಕೊಳ್ಳಬೇಕು ಹಾಗೂ ಟಿಜೆ ಅಬ್ರಹಾಂ ಅವರು ಪ್ರಾಸಿಕ್ಯೂಷನ್‌ಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕಾರ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

    ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟಿಸ್ ಕಾನೂನು ಮತ್ತು ಸಂವಿಧಾನ ಬಾಹಿರವಾಗಿದೆ. ರಾಜಭವನವನ್ನು ಬಳಸಿಕೊಂಡು ಬಹುಮತದ ಸರ್ಕಾರದವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮತ್ತು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಆದರೆ, ರಾಜ್ಯಪಾಲರು ಇನ್ನೂ ಯಾವುದೇ ನಿರ್ಧಾರಗಳನ್ನೂ ಕೈಗೊಂಡಿಲ್ಲದಿರುವುದರಿಂದ ಅವರ ನಡೆ ತೀವ್ರ ಕುತೂಹಲವನ್ನು ಮೂಡಿಸಿದೆ.

Recent Articles

spot_img

Related Stories

Share via
Copy link
Powered by Social Snap