ಮುಡಾ ಸೈಟ್​ ಹಿಂಪಡೆಯಲು ಸಿದ್ದರಾಮಯ್ಯ ಸಮ್ಮತಿ…..!

ಮೈಸೂರು

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ  ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ತಿರುವು ಪಡೆದುಕೊಂಡಿದೆ. ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ  ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ   ಅವರು ಸಮ್ಮತಿ ಸೂಚಿಸಿದ್ದಾರೆ. ಮುಡಾ ಹಗರಣ ಪತಿಗೆ ಕಂಟಕವಾಗಿ ಪರಿಣಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ನಿ ಪಾರ್ವತಿಯವರು ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ವಾಪಸ್​ ನೀಡಿದ್ದರು.

    ಈ ಬೆನ್ನಲ್ಲೇ ಮೈಸೂರು ಬಿಜೆಪಿ ಶಾಸಕ ಟಿ.ಎಸ್​ ಶ್ರೀವತ್ಸ್​ 2020ರಲ್ಲಿ 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಮುಡಾ ನಿವೇಶನಗಳನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಶಾಸಕ ಟಿಎಸ್​ ಶ್ರೀವತ್ಸ್​ ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. 50:50 ಅನುಪಾತದ ನಿವೇಶನಗಳನ್ನು ಹಿಂಪಡೆಯಲು ಅಗತ್ಯ ಕ್ರಮಕೈಗೊಳ್ಳಿ ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿದ್ದಾರೆ. ಇದರಿಂದ 50:50 ಅನುಪಾತದಲ್ಲಿ ನಿವೇಶನ ಪಡೆದವರಿಗೆ ಟೆನ್ಷನ್ ಶುರುವಾಗಿದೆ. 

   ಬಿಜೆಪಿ ಶಾಸಕ ಶ್ರೀವತ್ಸ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ “ತಮ್ಮ ಪತ್ನಿಯವರಾದ ಶ್ರೀಮತಿ ಪಾರ್ವತಿಯವರು ಮುಡಾ ನಿವೇಶನಗಳನ್ನು ಹಿಂದಿರುಗಿಸಿರುವುದನ್ನು ಸ್ವಾಗತಿಸುತ್ತೇವೆ. ಮುಂದುವರೆಯುತ್ತಾ, 2020 ರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ನಟೇಶ್ ಕೆಎಎನ್​ರವರ ಅವಧಿಯಿಂದ ದಿನೇಶ್ ಕೆಎಎಸ್​ ಅವಧಿಯವರೆಗೆ ಅಕ್ರಮ ನಿವೇಶನಗಳನ್ನು ಮನಸೋಇಚ್ಛೆ ಹಂಚಿಕೆ ಮಾಡಲಾಗಿದೆ.

   ಇಂತಹ ಎಲ್ಲ ಅಕ್ರಮ ನಿವೇಶನಗಳ ಆದೇಶಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿಯ ದೃಷ್ಟಿಯಿಂದ ರದ್ದುಗೊಳಿಸಿ ನಿವೇಶನಗಳನ್ನು ಹಿಂಪಡೆಯಲು ಸೂಕ್ತ ಆದೇಶ ನೀಡಬೇಕು.” ಎಂದು ಪತ್ರದ ಮೂಲಕ ಮನವಿ ಮಾಡಿದ್ದರು.

    2020 ರಿಂದ 2024 ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಜಮೀನಿಗೆ ಪರಿಹಾರವಾಗಿ ಕಾನೂನು ಬಾಹಿರವಾಗಿ ರಚಿತ ಬೇರೆ ಬಡಾವಣೆಗಳಲ್ಲಿ ನೀಡಲಾಗಿರುವ ಎಲ್ಲಾ ಬದಲಿ ನಿವೇಶನಗಳನ್ನು ಹಿಂಪಡೆಯಬೇಕು.

  •  ತಾಂತ್ರಿಕ ಸಮಿತಿಯ ವರದಿ ಮತ್ತು ಅಭಿಪ್ರಾಯಗಳನ್ನು ಕೂಡಲೇ ಜಾರಿಗೊಳಿಸಬೇಕು.
  • ಅಕ್ರಮ ನಿವೇಶನಗಳ ಬಗ್ಗೆ ಕೂಡಲೇ ಸಂಬಂಧಪಟ್ಟ ಉಪ ನೋಂದಣಾಧಿಕಾರಿ/ ಜಿಲ್ಲಾ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಿ ಆಸ್ತಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿವಾದಿತ ಆಸ್ತಿಗಳು ಎಂದು ಇಸಿಯಲ್ಲಿ ದಾಖಲಿಸಬೇಕು.
  • ಈ ಅಕ್ರಮ ನಿವೇಶನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳು ನಡೆಯದಂತೆ ಅದೇಶಿಸಬೇಕು ಎಂದು ಬಿಜೆಪಿ ಶಾಸಕ ಶ್ರೀವತ್ಸ್​ ಪತ್ರ ಬರೆದಿದ್ದಾರೆ. ಶಾಸಕ ಶ್ರೀವತ್ಸ್​ ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ.

 

Recent Articles

spot_img

Related Stories

Share via
Copy link