ಬೆಂಗಳೂರು
ಕೆಲವು ದಿನಗಳಿಂದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಸಕತ್ ಹೈಪ್‌ನಲ್ಲಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೆ ನಡುವೆ ಕೈ ಕೊಟ್ಟು ಹೋದವರು ಮತ್ತೆ ಕೈ ಹಿಡಿಯಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಧ್ವಜ ಹಿಡಿಯಲು ನಿಂತಿದ್ದಾರೆ. ಇಷ್ಟು ದಿನ ಅವರನ್ನು ಮತ್ತೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಪಕ್ಷದಲ್ಲಿಯೇ ಕೆಲವು ಅಪಸ್ವರ ಎದ್ದಿದ್ದವು. ಹಿಗಾಗಿ ಅವರನ್ನು ಕಾಂಗ್ರೆಸ್ ಸೇರಿಸಿಕೊಳ್ಳಲು ನಾಯಕರು ಚಿಂತಿಸುತ್ತಿದ್ದರು.
ಈಗ ಎಲ್ಲದಕ್ಕೂ ಕಾಲ ಕೂಡಿಬಂದಿದ್ದು, ಮತ್ತೆ ತಮ್ಮ ಮಾತೃಪಕ್ಷಕ್ಕೆ ಮರಳಲು ಮಾಜಿ ಸಂಸದ ಮುದ್ದಹನುಮೇಗೌಡ ಅವರಿಗೆ ಗ್ರೀನ್ ಸಿಗ್ನಲ್ ದೊರಲಿದೆ. ಫೆಬ್ರವರಿ 22ರ ಗುರುವಾರ ಸಂಜೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಗುರುವಾರ ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ ಸಮ್ಮುಖದಲ್ಲಿ ಸೇರ್ಪಡೆ ನಡೆಯಲಿದೆ.
ಇದಾದ ನಂತರ ಬಿಜೆಪಿಯಲ್ಲೂ ಅವರಿಗೆ ಟಿಕೆಟ್ ಸಿಗಲಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲಿಲ್ಲ. ಹೀಗಾಗಿ ಮತ್ತೆ ಕೈ ಹಿಡಿಯಲು ನಿರ್ಧರಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯೆತಯಿದೆ ಎಂಬ ಮಾಹಿತಿಯಿದೆ.
ಇನ್ನು, ಮಾಜಿ ಸಂಸದ ಮುದ್ದಹನುಮೇಗೌಡ ಅವರೇ ತುಮಕೂರಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಗುವ ಅವಕಾಶ ಇದೆ. ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತುಮಕೂರು ಜನರಲ್ಲಿ ಮನವಿ ಮಾಡಿದ್ದರು. ಹೀಗಾಗಿ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಪಕ್ಕಾ ಆಗಿದೆ.
“ನಾನು ನೇರವಾಗಿ ಲೋಕಸಭೆ ಚುನಾವಣೆಗೆ ಮತ ಕೇಳಲು ಬರುತ್ತೇನೆ. ಕಾಂಗ್ರೆಸ್‌ಗೆ ಮತ ನೀಡಬೇಕು. ಈಗಲೇ ಹೇಳ್ತಾ ಇದ್ದೇನೆ ಆಮೇಲೆ ನಾನು ಹೇಳಿಲ್ಲ ಅಂತಾ ಬೇರೆ ತೀರ್ಮಾನ ಮಾಡಬಾರದು. ಈಗಿನ ಸ್ಥಿತಿಯಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಈ ಬಗ್ಗೆ ಹೈಕಮಾಂಡ್ ಕೂಡ ಸೂಕ್ಷ್ಮವಾಗಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಮುದ್ದಹನುಮೇಗೌಡ ಬಿಟ್ಟು ಬೇರೆ ಯಾರಿಗೇ ಟಿಕೆಟ್ ಸಿಗಲಿ, 100ಕ್ಕೆ 99ರಷ್ಟು ಭಾಗ ಕಾಂಗ್ರೆಸ್‌ಗೆ ವೋಟ್ ಹಾಕಬೇಕು” ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ